ETV Bharat / state

ತಾಂತ್ರಿಕ ಯುಗದಲ್ಲಿ ಉದ್ಯೋಗಾಧಾರಿತ ಶಿಕ್ಷಣ ಅಗತ್ಯ: ಸಚಿವ ಸುಧಾಕರ್ - ಚಿಕ್ಕಬಳ್ಳಾಪುರದಲ್ಲಿ ಮಿನಿ ಉದ್ಯೋಗ ಮೇಳ ಸುದ್ದಿ

ಚಿಕ್ಕಬಳ್ಳಾಪುರ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಮಿನಿ ಉದ್ಯೋಗ ಮೇಳ ನಡೆಯಿತು.

ಸಚಿವ ಸುಧಾಕರ್
ಸಚಿವ ಸುಧಾಕರ್
author img

By

Published : Aug 29, 2021, 9:57 PM IST

ಚಿಕ್ಕಬಳ್ಳಾಪುರ: ಇವತ್ತಿನ ಜಾಗತೀಕರಣ ಯುಗದಲ್ಲಿ ವಿದ್ಯಾರ್ಥಿಗಳಿಗೆ ಉದ್ಯೋಗಾಧಾರಿತ ಕೌಶಲ್ಯ ತರಬೇತಿ, ಶಿಕ್ಷಣ ಬಹಳ ಮುಖ್ಯವಾಗಿದ್ದು, ಕೇಂದ್ರ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿರುವ ಹೊಸ ಶಿಕ್ಷಣ ನೀತಿಯನ್ನು ಇದೇ ತಳಹದಿಯ ಮೇಲೆ ರೂಪಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಜಿಲ್ಲಾಡಳಿತ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಕೌಶಲ್ಯ ಮಿಷನ್ ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಂಯುಕ್ತಾಶ್ರಯದಲ್ಲಿ ಇಂದು ಹಮ್ಮಿಕೊಂಡಿದ್ದ ಮಿನಿ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದರು.

ಮಿನಿ ಉದ್ಯೋಗ ಮೇಳದಿಂದ ಯುವಕರಲ್ಲಿ ಹೊಸ ಆಶಾಭಾವನೆ :

ಕೋವಿಡ್ ಸಾಂಕ್ರಾಮಿಕ ರೋಗ ಬಂದ ಕಳೆದ ಒಂದೂವರೆ ವರ್ಷದ ಅವಧಿಯಲ್ಲಿ ಬಹುಪಾಲು ಕ್ಷೇತ್ರದ ಜನರು ಸೇರಿ ನಾವೆಲ್ಲರೂ ಸಾಕಷ್ಟು ಆತಂಕಕ್ಕೆ ಒಳಗಾಗಿದ್ದೇವೆ. ಈ ಸಾಂಕ್ರಾಮಿಕ ರೋಗಕ್ಕೆ ಎಷ್ಟೋ ಜನ ಸಾವು-ನೋವುಗಳು ಆಗಿವೆ. ಇದರಿಂದ ಜೀವನೋಪಾಯವೇ ಕಳೆದುಹೋಗಿದೆ ಎಂಬ ಭಯ ಇದುವರೆಗೂ ಹೋಗಿಲ್ಲ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಜಿಲ್ಲಾಡಳಿತ ಆಯೋಜಿಸಿರುವ ಮಿನಿ ಉದ್ಯೋಗ ಮೇಳವು ಯುವಕರಲ್ಲಿ ಹೊಸ ಆಶಾಭಾವನೆ ಮೂಡಿಸಿದೆ. ಅಲ್ಲದೆ ಎಲ್ಲಾ ಆತಂಕಗಳನ್ನು ದೂರ ಮಾಡಿದೆ. ಮೇಳ ಆಯೋಜಿಸಿದ ಜಿಲ್ಲಾಡಳಿತ ಹಾಗೂ ಇತರೆ ಇಲಾಖೆಗಳಿಗೆ ವಿಶೇಷ ಅಭಿನಂದನೆ ತಿಳಿಸಿದರು.

ಮಿನಿ ಉದ್ಯೋಗ ಮೇಳ ಉದ್ಘಾಟನೆ
ಮಿನಿ ಉದ್ಯೋಗ ಮೇಳ ಉದ್ಘಾಟನೆ

ತಾಂತ್ರಿಕ ಯುಗದಲ್ಲಿ ಉದ್ಯೋಗಾಧಾರಿತ ಶಿಕ್ಷಣ ಅಗತ್ಯ:

ಪ್ರಸ್ತುತ ತಾಂತ್ರಿಕ ಯುಗದಲ್ಲಿ ಉದ್ಯೋಗಾಧಾರಿತ ಶಿಕ್ಷಣ ಅಗತ್ಯ. ಆದರೆ ನಮ್ಮ ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿಯ ಕೊರತೆ ಇದೆ. ಇವತ್ತಿನ ದಿನಗಳಲ್ಲಿ ವಿದ್ಯೆಯಲ್ಲಿ ಕೌಶಲ್ಯ ಇರಬೇಕು ಎಂಬ ಉದ್ದೇಶದಿಂದಲೇ ಕೇಂದ್ರ ಸರ್ಕಾರ ಹೊಸ ಶಿಕ್ಷಣ ನೀತಿಯನ್ನು ಜಾರಿ ಮಾಡಿದೆ. ವಿದ್ಯಾರ್ಥಿಗಳು ಬೇಡಿಕೆಗೆ ಅನುಗುಣವಾಗಿ ಶಿಕ್ಷಣ ಪಡೆದು ಉದ್ಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ತಂತ್ರಜ್ಞಾನ ಬಳಸಿಕೊಂಡು ಕೃಷಿ ಮಾಡಬೇಕಿದೆ:

ಇವತ್ತಿನ ದಿನಗಳಲ್ಲಿ ಕೃಷಿಯಲ್ಲಿ ಆಧುನಿಕತೆ ಕಂಡುಕೊಳ್ಳಬೇಕು. ತಂತ್ರಜ್ಞಾನ ಬಳಸಿಕೊಂಡು ಕೃಷಿ ಮಾಡಬೇಕಿದೆ. ಇವತ್ತು ವಿದ್ಯಾರ್ಥಿಗಳು ಕೃಷಿ ಮಾಡಲ್ಲ ಎಂಬುದೇನೂ ಇಲ್ಲ. ಎಂಜಿನಿಯರ್ ವಿದ್ಯಾರ್ಥಿಗಳು ಕೂಡ ಇವತ್ತು ಕೃಷಿಯಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಇದರ ಜತೆಗೆ ಸ್ವಯಂ ಉದ್ಯೋಗದಲ್ಲೂ ಸಾಕಷ್ಟು ವಿಪುಲ ಅವಕಾಶಗಳಿದ್ದು, ಯುವಕರು ಈ ಬಗ್ಗೆ ಹೆಚ್ಚಿನ ಚಿಂತನೆ ಮಾಡಬೇಕು ಎಂದು ಹೇಳಿದರು.

ಉದ್ಯೋಗ ಮೇಳದಲ್ಲಿ ಒಟ್ಟು 7000-8000 ಅರ್ಜಿಗಳು ಸಲ್ಲಿಕೆ:

ಉದ್ಯೋಗ ಮೇಳದಲ್ಲಿ ಒಟ್ಟು 7000-8000 ಅರ್ಜಿಗಳು ಸಲ್ಲಿಕೆಯಾಗಿದ್ದು, ಇದರಲ್ಲಿ ಅರ್ಧದಷ್ಟು ಅರ್ಜಿಗಳು ಆನ್​ಲೈನ್ ಮೂಲಕ ಸಲ್ಲಿಕೆಯಾಗಿವೆ. ಇಲ್ಲಿ 900-1000 ಹುದ್ದೆಗಳು ಲಭ್ಯವಿದ್ದು, ಬ್ಯಾಂಕಿಂಗ್ ಸೆಕ್ಟರ್, ಸರ್ವೀಸ್ ಇಂಡಸ್ಟ್ರೀ, ಕೃಷಿ ಆಧಾರಿತ ಉದ್ಯಮಗಳು, ಆಟೋ ಮೊಬೈಲ್ ಹಾಗೂ ಇತರೆ ಕಂಪನಿಗಳು ಭಾಗಿಯಾಗಿದ್ದು, ಈ ಕಂಪನಿಗಳು 10,000 ರಿಂದ 25,000 ರೂಪಾಯಿವರೆಗೂ ಸಂಬಳ ಕೊಡುವುದಾಗಿ ತಿಳಿಸಿವೆ. ಹಾಗಾಗಿ ಉದ್ಯೋಗಾಕಾಂಕ್ಷಿಗಳು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದ ಅವರು, ಮೇಳದಲ್ಲಿ ಉದ್ಯೋಗ ಸಿಗದವರು ಧೃತಿಗೆಡುವ ಅಗತ್ಯವಿಲ್ಲ. ಮುಂದೆ ಸಾಕಷ್ಟು ಅವಕಾಶಗಳು ಇವೆ ಎಂದು ಭರವಸೆ ನೀಡಿದರು.

890 ಅಭ್ಯರ್ಥಿಗಳಿಗೆ ಸ್ಥಳದಲ್ಲೇ ಉದ್ಯೋಗ:

ಉದ್ಯೋಗ ಮೇಳದಲ್ಲಿ 3,351 ಅಭ್ಯರ್ಥಿಗಳು ಭಾಗವಹಿಸಿದ್ದರು. ಈ ಪೈಕಿ 1,890 ಮಂದಿ ಪುರುಷ ಅಭ್ಯರ್ಥಿಗಳು, 1,416 ಮಹಿಳಾ ಅಭ್ಯರ್ಥಿಗಳು ಆಗಿದ್ದಾರೆ. ಉದ್ಯೋಗಕ್ಕಾಗಿ ಆನ್​ಲೈನ್​ನಲ್ಲಿ 1,618, ನೇರವಾಗಿ 1,733 ಮಂದಿ ಅರ್ಜಿ ಸಲ್ಲಿಸಿದ್ದು, ಒಟ್ಟು 25 ಕಂಪನಿಗಳು ಮೇಳದಲ್ಲಿ ಭಾಗವಹಿಸಿದ್ದವು. ಈ ಪೈಕಿ 890 ಮಂದಿಗೆ ಉದ್ಯೋಗವಕಾಶ ನೀಡಿದ್ದು, 150 ಮಂದಿ ಅಭ್ಯರ್ಥಿಗಳು ಮುಂದಿನ ಹಂತದ ಸಂದರ್ಶನಕ್ಕೆ ಆಯ್ಕೆಯಾಗಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.