ಚಿಕ್ಕಬಳ್ಳಾಪುರ: ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದು, ಜಿಲ್ಲೆಯ ಉಸ್ತುವಾರಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಸತಸ ವ್ಯಕ್ತಪಡಿಸಿದ್ದಾರೆ.
ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಇಡೀ ರಾಜ್ಯಕ್ಕೆ ಪ್ರಥಮ ಸ್ಥಾನಗಳಿಸಿರುವುದು ಹೆಮ್ಮೆಯ ಸಂಗತಿ. ಚಿಕ್ಕಬಳ್ಳಾಪುರ ಶಾಸಕನಾಗಿ, ಉಸ್ತುವಾರಿ ಸಚಿವನಾಗಿ ಅತೀವ ಸಂತಸ ತಂದಿದೆ. ಜಿಲ್ಲೆಯ ಎಲ್ಲಾ ವಿದ್ಯಾರ್ಥಿಗಳಿಗೆ, ಪೋಷಕರಿಗೆ, ಶಿಕ್ಷಕರಿಗೆ ಮತ್ತು ಜಿಲ್ಲಾಡಳಿತಕ್ಕೆ ನನ್ನ ವಿಶೇಷ ಅಭಿನಂದನೆಗಳು ಎಂದು ಟ್ವೀಟ್ ಮಾಡಿ ಸಂಸತ ವ್ಯಕ್ತಪಡಿಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆ ಮಳೆ ಕೊರೆತೆ ಹಾಗೂ ಅಂತರ್ಜಲ ಕುಸಿತದಿಂದ ಬರಪೀಡಿತವಾಗಿದ್ದರೂ ಶೈಕ್ಷಣಿಕವಾಗಿ ಅತ್ಯಂತ ಸಂಮೃದ್ಧಿಯಾಗಿದೆ ಎಂಬುದು ಈ ಬಾರಿಯ ಎಸ್ಎಸ್ಎಲ್‌ಸಿ ಫಲಿತಾಂಶ ತೋರಿಸಿದೆ ಎಂದಿದ್ದಾರೆ.