ಚಿಕ್ಕಬಳ್ಳಾಪುರ: ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಮಿಟ್ಟೇಮಿರಿ ಹೋಬಳಿಯ ಗ್ರಾಮವೊಂದರಲ್ಲಿ ಅಪ್ರಾಪ್ತೆ ಮೇಲೆ ಅಪ್ರಾಪ್ತ ಹುಡುಗನೇ ಅತ್ಯಾಚಾರವೆಸಗಿರುವ ಆರೋಪ ಕೇಳಿ ಬಂದಿದೆ.
ಕೇವಲ 6 ವರ್ಷದ ಪುಟ್ಟ ಹುಡುಗಿಯ ಮೇಲೆ ಅದೇ ಗ್ರಾಮದ 16 ವರ್ಷದ ಹುಡುಗ ಅತ್ಯಾಚಾರವೆಸಗಿದ್ದಾನೆ ಎನ್ನಲಾಗಿದೆ. ನಿನ್ನೆ ಸಂಜೆ 5 ಗಂಟೆ ವೇಳೆಗೆ ಹುಡುಗಿ ಆಟ ಆಡುವಾಗ ಅಪ್ರಾಪ್ತ ಹುಡುಗ ಸ್ಥಳಕ್ಕೆ ಬಂದು ಅತ್ಯಾಚಾರವೆಸಗಿದ್ದಾನೆ ಎನ್ನುವ ಆರೋಪ ಕೇಳಿ ಬಂದಿದೆ. ಇದರಿಂದ ಗಾಬರಿಗೊಂಡ ಬಾಲಕಿ ಜೋರಾಗಿ ಕಿರುಚಿಕೊಂಡಿದ್ದು, ಕೂಡಲೇ ಸುತ್ತಮುತ್ತಲಿದ್ದ ಜನ ಸ್ಥಳಕ್ಕೆ ಧಾವಿಸಿದ್ದಾರೆ. ತಕ್ಷಣ ಹುಡುಗ ಅಲ್ಲಿಂದ ಓಡಲಾರಂಭಿಸಿದ್ದಾನೆ. ಆದರೆ, ಜನರು ಅಪ್ರಾಪ್ತನನ್ನು ಬೆನ್ನಟ್ಟಿ ಹಿಡಿದು ಥಳಿಸಿ ಸ್ಥಳೀಯ ಪಾತಪಾಳ್ಯ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಇನ್ನು ಬಾಲಕಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.