ಚಿಕ್ಕಬಳ್ಳಾಪುರ: ಮದ್ಯ ಮಾರಾಟದ ಬಗ್ಗೆ ಸರ್ಕಾರ ತಗೆದುಕೊಂಡ ನಿಲುವು ಸರಿಯಾದ ನಿರ್ಧಾರವಲ್ಲ ಎಂದು ಚಿಂತಾಮಣಿ ಶಾಸಕ ಎಂ.ಕೃಷ್ಣಾರೆಡ್ಡಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮದ್ಯ ಮಾರಟದ ಬಗ್ಗೆ ಸರ್ಕಾರ ತಗೆದುಕೊಂಡ ನಿಲುವು ಸರಿಯಲ್ಲ, ಪಾಸಿಟಿವ್ ಪ್ರಕರಣಗಳು ಇದ್ದಾಗ ಮದ್ಯ ಸೇವನೆ ಮಾಡಿದರೆ ಸೋಂಕು ಪತ್ತೆ ಹಚ್ಚಲು ಸಾಧ್ಯವಾಗುವುದಿಲ್ಲ. ಲಾಕ್ಡೌನ್ ಸಡಿಲಿಕೆಯಾಗುವವರೆಗೂ ಮದ್ಯ ಮಾರಾಟ ನಿಷೇಧಿಸಬೇಕು. ಈ ವಿಚಾರದ ಬಗ್ಗೆ ರಾಜ್ಯ ಸರ್ಕಾರ ಗಂಭೀರ ನಿರ್ಧಾರ ತೆಗೆದುಕೊಳ್ಳಬೇಕು ಎಂದರು.
ಕ್ಷೇತ್ರದ ಜನತೆಯ ಕಷ್ಟಗಳಿಗೆ ಶಾಸಕರು ಸ್ಪಂದಿಸುತ್ತಿಲ್ಲ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ನಾನು ಹೋದ ಕಡೆಗಳಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವುದರಿಂದ ಸಾಮಾಜಿಕ ಅಂತರ ಕಾಪಾಡಲು ಸಾಧ್ಯವಾಗುವುದಿಲ್ಲ. ಹಾಗಾಗಿ ಕ್ಷೇತ್ರದಲ್ಲೇ ಇದ್ದು ಎಲ್ಲಾ ಮಾಹಿತಿ ಪಡೆದುಕೊಂಡು ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದೇನೆ. ಶಾಸಕನಾಗಿ ನನ್ನ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತಿದ್ದೇನೆ ಎಂದರು.