ಚಿಕ್ಕಬಳ್ಳಾಪುರ: ಆಧುನಿಕ ಯುಗದಲ್ಲಿ ರೈತರೂ ಸಹ ಆಧುನಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳುವುದರ ಮೂಲಕ ಕೃಷಿಯಲ್ಲಿ ಉತ್ಪಾದನೆ ಹೆಚ್ಚಿಸಿಕೊಳ್ಳಬಹುದೆಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಹೇಳಿದರು.
ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲೂಕಿನ ಸೋಮೇನಹಳ್ಳಿ ಗ್ರಾಮದ ನೂತನ ರೈತ ಸಂಪರ್ಕ ಕೇಂದ್ರದ ಕಚೇರಿ ಬಳಿ ಕೃಷಿ ಇಲಾಖೆ, ಕೃಷಿ ವಿಜ್ಞಾನ ಕೇಂದ್ರ ಹಾಗೂ ಕೃಷಿ ಸಂಬಂಧಿತ ಇಲಾಖೆಗಳ ಸಹಯೋಗದೊಂದಿಗೆ ಸಮಗ್ರ ಕೃಷಿ ಅಭಿಯಾನ ಯೋಜನೆಯಡಿ ಕೃಷಿ ಮಾಹಿತಿ ಆಂದೋಲನ ಹಾಗೂ ಜಲ ಶಕ್ತಿ ಅಭಿಯಾನ ಕಾರ್ಯಕ್ರಮದ ಜೊತೆಗೆ ಸೋಮೇನಹಳ್ಳಿ ಹೋಬಳಿಯ ನೂತನ ರೈತ ಸಂಪರ್ಕ ಕೇಂದ್ರದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ರೈತರು ಇನ್ನೂ ಹಳೇಯ ಪದ್ಧತಿಗಳನ್ನು ಅಳವಡಿಸಿಕೊಂಡು ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುತ್ತಿರುವುದರಿಂದ ಉತ್ಪಾದನೆ ಜೊತೆಗೆ ಮಾನವ ಶ್ರಮ ಕೂಡ ವ್ಯರ್ಥವಾಗುತ್ತಿದೆ. ವಾಣಿಜ್ಯ ಬೆಳೆಗಳಿಂದ ಅಧಿಕ ಲಾಭ ಸಾಧ್ಯ. ಆದ್ದರಿಂದ ವಾಣಿಜ್ಯ ಬೆಳೆಗಳಿಗೆ ಆದ್ಯತೆ ನೀಡಬೇಕು ಎಂದರು.