ETV Bharat / state

ಮಾಜಿ ಶಾಸಕರ ಮನೆಯಲ್ಲೇ ಸಾರ್ವಜನಿಕರ ಸಮಸ್ಯೆ ಆಲಿಸಿದ ಸಂಸದ ಮುನಿಸ್ವಾಮಿ - S. Muniswamy, MP for Kolar

ಕೋಲಾರ ಸಂಸದ ಎಸ್.ಮುನಿಸ್ವಾಮಿ ಚಿಂತಾಮಣಿ ಕ್ಷೇತ್ರದ ಮಾಜಿ ಶಾಸಕರ ಮನೆಯಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಿದ್ದು, ಕ್ಷೇತ್ರದಲ್ಲಿ ಸಾಕಷ್ಟು ಭಿನ್ನಾಭಿಪ್ರಾಯ ಮೂಡಿಸಿದೆ.

Chikkaballapur
ಕೋಲಾರ ಸಂಸದ ಎಸ್.ಮುನಿಸ್ವಾಮಿ
author img

By

Published : Jun 6, 2020, 3:00 PM IST

ಚಿಕ್ಕಬಳ್ಳಾಪುರ: ಕೋಲಾರ ಸಂಸದ ಎಸ್.ಮುನಿಸ್ವಾಮಿ ಚಿಂತಾಮಣಿ ಕ್ಷೇತ್ರದ ಮಾಜಿ ಶಾಸಕರ ಮನೆಯಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಿದ್ದಾರೆ.

ಕ್ಷೇತ್ರದ ಜನತೆ ಜನ ನಾಯಕರ ಬಳಿ ಸಮಸ್ಯೆಗಳನ್ನು ಹೇಳಿಕೊಳ್ಳುವುದು ಸಹಜ. ಆದರೆ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ನಿರ್ಣಾಯಕ ಪಾತ್ರವನ್ನು ಪಡೆದುಕೊಂಡಿರುವ ಚಿಂತಾಮಣಿ ಕ್ಷೇತ್ರಕ್ಕೆ ಸಂಸದರು ಭೇಟಿ ನೀಡಿದ್ದು, ಮಾಜಿ ಶಾಸಕ ಎಂ.ಸಿ.ಸುಧಾಕರ್ ಮನೆಗೆ ಭೇಟಿ ನೀಡಿದ ವೇಳೆ ಹಲವು ಸಾರ್ವಜನಿಕರ ಅಹವಾಲುಗಳನ್ನು ಸ್ವೀಕಾರ ಮಾಡಿ ಸಮಸ್ಯೆಗಳನ್ನು ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸಂಸದ ಎಸ್.ಮುನಿಸ್ವಾಮಿ

ಸದ್ಯ ಮಾಜಿ ಶಾಸಕರ ಮನೆಯಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿರುವ ವಿಚಾರಕ್ಕೆ ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದಾರೆ. ನಂತರ ನಗರದ ಐಬಿಗೆ ಭೇಟಿ ನೀಡಿ ಸರ್ಕಾರಿ ಅಧಿಕಾರಿಗಳಿಗೆ ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸುವಂತೆ ಸಂಸದರು ಸೂಚನೆ ನೀಡಿದ್ದಾರೆ.

ಇದೇ ವೇಳೆ ಸಾಕಷ್ಟು ಬಾರಿ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವಂತೆ ಸಂಸದರು ತಾಕೀತು ಮಾಡಿದರೂ ಸಾರ್ವಜನಿಕರು ಗುಂಪು ಕಟ್ಟಿ ನಿಯಮ ಉಲ್ಲಂಘಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.