ETV Bharat / state

ಚಿಕ್ಕಬಳ್ಳಾಪುರ: ನಡುರಸ್ತೆಯಲ್ಲಿ ಯುವಕನ ಮೇಲೆ ಲಾಂಗ್​ನಿಂದ ಹಲ್ಲೆ - ಈಟಿವಿ ಭಾರತ್​ ಕನ್ನಡ

ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರದಲ್ಲಿ ಲಾಂಗ್​ ಮಚ್ಚುಗಳಿಂದ ಹತ್ಯೆಗೆ ಯತ್ನ- ಓಡಿಹೋಗಿ ಪ್ರಾಣಾಪಾಯದಿಂದ ಪಾರಾದ ವ್ಯಕ್ತಿ

Kn_ckb_02_02_murder_av_ka10046
ನಡು ರಸ್ತೆಯಲ್ಲಿ ಲಾಂಗ್ ಹಿಡಿದುಕೊಂಡು ಕೊಲೆಗೆ ಯತ್ನ
author img

By

Published : Aug 2, 2022, 10:56 PM IST

ಚಿಕ್ಕಬಳ್ಳಾಪುರ: ಹಳೇ ದ್ವೇಷದ ಹಿನ್ನೆಲೆ ಸಿನಿಮೀಯ ರೀತಿಯಲ್ಲಿ ವ್ಯಕ್ತಿಯನ್ನು ಹಿಂಬಾಲಿಸಿ ಲಾಂಗ್ ಮಚ್ಚುಗಳಿಂದ ದಾಳಿ ನಡೆಸಿ ಹತ್ಯೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ಶಿಡ್ಲಘಟ್ಟ ನಗರದ ಕಾಲೇಜು ರಸ್ತೆಯಲ್ಲಿ ನಡೆದಿದೆ.

ಫೈರೋಜ್ ಹಲ್ಲೆಗೊಳಗಾದ ಯುವಕ. ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪಕ್ಕದ ರಸ್ತೆಯಲ್ಲಿ ಖಲಂಧರ್​ ಮತ್ತು ಆತನ ಸಹಚರರು ಫೈರೋಜ್ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಫೈರೋಜ್ ಅಲ್ಲಿಂದ ತಪ್ಪಿಸಿಕೊಂಡು ಓಡಿಹೋಗಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಘಟನೆಯಲ್ಲಿ ಆತನ ಕೈ-ಬೆರಳು ಕಟ್ಆಗಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನಿಸಲಾಗಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಈ ಹಿಂದೆ ಕೊಲೆ ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದ ಖಲಂಧರ್​ನನ್ನು ಗಡಿಪಾರು ಮಾಡಲಾಗಿತ್ತು. ಪೊಲೀಸರ ನಿರ್ಲಕ್ಷ್ಯದಿಂದಾಗಿ ಖಲಂಧರ್ ನಗರಕ್ಕೆ ಹಿಂತಿರುಗಿದ್ದಾನೆಂಬ ಆರೋಪ ಕೇಳಿ ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಫೈರೋಜ್ ಸಹೋದರ ನಗರ ಠಾಣೆಯಲ್ಲಿ ದೂರು ನೀಡಿದ್ದು ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

ಇದನ್ನೂ ಓದಿ: ತುಮಕೂರು: ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಕೊಚ್ಚಿ ಹೋದ ಶಿಕ್ಷಕ ಸಾವು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.