ಚಿಂತಾಮಣಿ (ಚಿಕ್ಕಬಳ್ಳಾಪುರ): ನೀರಿಗಾಗಿ ನಗರಸಭೆ ಅಧಿಕಾರಿಗಳ ವಿರುದ್ಧ ನಗರಸಭೆ ಸದಸ್ಯರು ಪ್ರತಿಭಟನೆ ನಡೆಸಿರುವ ಘಟನೆ ಜಿಲ್ಲೆಯ ಚಿಂತಾಮಣಿ ನಗರದಲ್ಲಿ ನಡೆದಿದೆ.
ಚಿಂತಾಮಣಿ ನಗರದ ಹಲವಾರು ವಾರ್ಡ್ಗಳಲ್ಲಿ ಕಳೆದ ಮೂರು ತಿಂಗಳಿನಿಂದ ಸರಿಯಾಗಿ ನೀರು ಸರಬರಾಜು ಆಗುತ್ತಿಲ್ಲ ಎಂದು ಸ್ಥಳೀಯರು ಹಲವು ಬಾರಿ ದೂರು ನೀಡಿದ್ದರು. ಆದರೂ ಕೂಡ ನೀರಿನ ಸಮಸ್ಯೆ ಬಗೆಹರಿಸಿಲ್ಲ ಎಂದು ಸದಸ್ಯರು ಆರೋಪಿಸಿದರು. ಕೊರೊನಾ ನಡುವೆ ಸ್ಥಳೀಯರು ನೀರಿಗಾಗಿ ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ. ಮತ ನೀಡಿದ ಜನರು ನಮಗೆ ಪ್ರತಿನಿತ್ಯ ಹಿಡಿಶಾಪ ಹಾಕುವಂತಾಗಿದೆ ಎಂದು ಅವರು ಅಳಲು ತೋಡಿಕೊಂಡರು.
ಮೊದಲು ನಗರಕ್ಕೆ 128 ಟ್ಯಾಂಕರ್ ನೀರು ಸರಬರಾಜು ಮಾಡಲಾಗುತ್ತಿದ್ದು, ಆಗ ಒಂದು ತಿಂಗಳು ಸಮಸ್ಯೆ ಇರುತ್ತಿತ್ತು. ಈಗ 400 ಟ್ಯಾಂಕರ್‌ಗಳು ನೀರು ಸರಬರಾಜು ಮಾಡುತ್ತಿದ್ದರೂ ಅದೇ ಸಮಸ್ಯೆ ಉಂಟಾಗುತ್ತಿದೆ. ಇದರ ಬಗ್ಗೆ ಎಲ್ಲರ ಗಮನಕ್ಕೆ ತಂದರೂ ಸಮಸ್ಯೆ ಬಗೆಹರಿಯಲಿಲ್ಲ. ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಭೇಟಿ ನೀಡಿ ಸಮಸ್ಯೆ ಬಗೆಹರಿಸಬೇಕೆಂದು ಆಗ್ರಹಿಸಿದರು.