ETV Bharat / state

ಸ್ಫೋಟಕ ವಸ್ತುಗಳನ್ನು ಎಚ್ಚರಿಕೆಯಿಂದ ನಿರ್ವಹಿಸುವ ಬಗ್ಗೆ ತರಬೇತಿ ನೀಡುವ ಅಗತ್ಯವಿದೆ: ಸಚಿವ ಮುರುಗೇಶ್ ನಿರಾಣಿ

ಚಿಕ್ಕಬಳ್ಳಾಪುರ ಜಿಲ್ಲೆ ಗುಂಡಿಬಂಡೆ ತಾಲೂಕಿನ ಹಿರೇನಾಗವೇಲಿಯಲ್ಲಿ ಜಿಲೆಟಿನ್ ಕಡ್ಡಿ ಸ್ಫೋಟಿಸಿ ಆರು ಮಂದಿ ಸಾವನ್ನಪ್ಪಿದ ಘಟನೆಗೆ ಸಚಿವ ಮುರುಗೇಶ್.ಆರ್ ನಿರಾಣಿ ಆಘಾತ ವ್ಯಕ್ತಪಡಿಸಿದ್ದಾರೆ. ಗಣಿಗಾರಿಕೆ ಚಟುವಟಿಕೆಗಳಲ್ಲಿ ತೊಡಗಿರುವ ಜನರಿಗೆ ಗಣಿಗಾರಿಕೆ ಸ್ಥಳಗಳಲ್ಲಿ ಜಿಲೆಟಿನ್ ಕಡ್ಡಿಗಳು ಸ್ಫೋಟಕಗಳು ಮತ್ತು ಇತರ ಸ್ಫೋಟಕ ವಸ್ತುಗಳನ್ನು ಎಚ್ಚರಿಕೆಯಿಂದ ನಿರ್ವಹಿಸುವ ಬಗ್ಗೆ ತರಬೇತಿ ನೀಡುವ ಅಗತ್ಯವಿದೆ ಎಂದು ಒತ್ತಿ ಹೇಳಿದ್ದಾರೆ.

gelatin sticks  blast in chikkaballapur
ಸಚಿವ ಮುರುಗೇಶ್ ನಿರಾಣಿ
author img

By

Published : Feb 23, 2021, 12:20 PM IST

ನವದೆಹಲಿ/ಬೆಂಗಳೂರು: ಇನ್ಮುಂದೆ ಕಲ್ಲುಕ್ವಾರಿ ಹಾಗೂ ಗಣಿಗಾರಿಕೆ ಪ್ರದೇಶಗಳಲ್ಲಿ ಸ್ಫೋಟಕ ವಸ್ತುಗಳನ್ನು ಬಳಸಲು ಸರ್ಕಾರದಿಂದ ಅನುಮತಿ ಪಡೆದವರು ಮಾತ್ರ ಬಳಸಲು ಹೊಸ ಕಾನೂನು ಜಾರಿ ಮಾಡುತ್ತೇವೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆ ಗುಂಡಿಬಂಡೆ ತಾಲೂಕಿನ ಹಿರೇನಾಗವೇಲಿಯಲ್ಲಿ ಜಿಲೆಟಿನ್ ಕಡ್ಡಿ ಸ್ಫೋಟಿಸಿ ಆರು ಮಂದಿ ಸಾವನ್ನಪ್ಪಿರುವ ಘಟನೆಗೆ ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ಆರ್ ನಿರಾಣಿ ಆಘಾತ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಲವರು ಕಾನೂನು ಬಾಹಿರವಾಗಿ ಕಲ್ಲು ಕ್ವಾರಿ ಮತ್ತು ಗಣಿ ಪ್ರದೇಶಗಳಲ್ಲಿ ಸ್ಫೋಟಕ ವಸ್ತುಗಳನ್ನು ಬಳಕೆ ಮಾಡುತ್ತಿರುವುದರಿಂದಲೇ ಇಂಥ ಘಟನೆಗಳಿಗೆ ಕಾರಣವಾಗುತ್ತಿದೆ. ಇದನ್ನು ತಡೆಯಲು ಸರ್ಕಾರದಿಂದ ಲೈಸೆನ್ಸ್ ಪಡೆದವರು ಮಾತ್ರ ಸ್ಫೋಟಕ ವಸ್ತುಗಳನ್ನು ಬಳಸುವ ಕಾನೂನು ಜಾರಿ ಮಾಡುವುದಾಗಿ ತಿಳಿಸಿದರು.

ಈ ಘಟನೆಗಳು ನುರಿತ ಕೆಲಸಗಾರರಿಗೆ ತರಬೇತಿ ಮತ್ತು ಗಣಿಗಾರಿಕೆ ಶಾಲೆಯ ಸ್ಥಾಪನೆಯ ಮಹತ್ವವನ್ನು ನಮಗೆ ನೆನಪಿಸುತ್ತವೆ. ಗಣಿಗಾರಿಕೆ ಚಟುವಟಿಕೆಗಳಲ್ಲಿ ತೊಡಗಿರುವ ಜನರಿಗೆ ಗಣಿಗಾರಿಕೆ ಸ್ಥಳಗಳಲ್ಲಿ ಜಿಲೆಟಿನ್ ಕಡ್ಡಿಗಳು ಸ್ಫೋಟಕಗಳು ಮತ್ತು ಇತರ ಸ್ಫೋಟಕ ವಸ್ತುಗಳನ್ನು ಎಚ್ಚರಿಕೆಯಿಂದ ನಿರ್ವಹಿಸುವ ಬಗ್ಗೆ ತರಬೇತಿ ನೀಡುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

ರಾಜ್ಯದಲ್ಲಿ ಗಣಿಗಾರಿಕೆ ಶಾಲೆಯನ್ನು ಸ್ಥಾಪಿಸಲು ತೀರ್ಮಾನಿಸಿದ್ದೇವೆ. ಜೊತೆಗೆ ಗಣಿಗಾರಿಕೆ ಪ್ರದೇಶಗಳಲ್ಲಿನ ಜನರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ಬದ್ಧವಾಗಿದೆ. ಅಕ್ರಮ ಗಣಿಗಾರಿಕೆ ಚಟುವಟಿಕೆಗಳು ಮತ್ತು ಅಕ್ರಮಗಳಲ್ಲಿ ಭಾಗಿಯಾಗಿರುವ ಯಾರಾದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಕೆಲವು ಕಡೆ ಕಾನೂನು ಬಾಹಿರವಾಗಿ ಕಲ್ಲು ಗಣಿಗಾರಿಕೆ ಚಟುವಟಿಕೆಗಳು ನಡೆಯುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಒಂದು ವೇಳೆ ನಮ್ಮ ಅಧಿಕಾರಿಗಳು ಇದರಲ್ಲಿ ಭಾಗಿಯಾಗಿರುವುದು ಕಂಡುಬಂದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇನೆ ಎಂದು ಎಚ್ಚರಿಸಿದರು. ಘಟನೆಗೆ ಕಾರಣರಾದವರು ಯಾರೇ ಪ್ರಭಾವಿಗಳಾಗಿದ್ದರೂ ಎಷ್ಟೇ ದೊಡ್ಡವರಾಗಿದ್ದರೂ ಸುಮ್ಮನೆ ಬಿಡುವುದಿಲ್ಲ. ಕಾನೂನಿನ ಪ್ರಕಾರ ಏನು ಕ್ರಮ ಕೈಗೊಳ್ಳಬೇಕೋ ಅದನ್ನೇ ಸರ್ಕಾರ ಮಾಡಲಿದೆ ಎಂದರು.

ಮೃತರ ಕುಟುಂಬಗಳಿಗೆ ಸಂತಾಪ:

ಸಂತ್ರಸ್ತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದ ಸಚಿವ ಮುರುಗೇಶ್​ ನಿರಾನಿ, ಮೃತರ ಕುಟುಂಬ ಸದಸ್ಯರಿಗೆ ಮತ್ತು ಗಾಯಾಳುಗಳಿಗೆ ಎಲ್ಲಾ ನೆರವು ನೀಡುವ ಭರವಸೆ ನೀಡಿದ್ದಾರೆ. ಶಿವಮೊಗ್ಗ ಸ್ಫೋಟದ ನಂತರ ಮತ್ತೊಂದು ದುರಂತ ನಡೆದಿರುವುದು ತನಗೆ ತೀವ್ರ ನೋವಾಗಿದೆ. ಜಿಲೆಟಿನ್ ಕಡ್ಡಿ ಸ್ಫೋಟದಲ್ಲಿ ಆರು ಜನರು ಪ್ರಾಣ ಕಳೆದುಕೊಂಡಿರುವುದು ತುಂಬಾ ನೋವು ತಂದಿದೆ ಎಂದು ಕಂಬನಿ ಮಿಡಿದಿದ್ದಾರೆ.

ಘಟನೆಗೆ ಕಾರಣರಾದ ಆರೋಪಿಗಳ ವಿರುದ್ಧ ಕಠಿಣ ಕಾನೂನು ತೆಗೆದುಕೊಳ್ಳಲಾಗುವುದು. ಸರ್ಕಾರ ಸಂಪೂರ್ಣ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು. ರಾಜ್ಯದಲ್ಲಿ ಇಂತಹ ಘಟನೆಗಳು ನಡೆಯುತ್ತಿರುವುದು ಅತ್ಯಂತ ದುರದೃಷ್ಟಕರ, ನಾವು ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದರೂ ಈ ಬಗೆಯ ದುರಂತಗಳು ಮರುಕಳಿಸುತ್ತಿರುವುದು ಅತ್ಯಂತ ನೋವಿನ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು.

ಶಿವಮೊಗ್ಗ ಸ್ಫೋಟಕ್ಕೆ ಮೊದಲೇ ಸ್ಫೋಟಕಗಳನ್ನು ಸಂಗ್ರಹಿಸಿಡಲಾಗಿತ್ತೇ? ಎಂಬ ಬಗ್ಗೆ ನಾನು ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಯಾರು ಎಷ್ಟೇ ಪ್ರಭಾವ ಬೀರಿದರೂ ಆರೋಪಿಗಳನ್ನು ರಕ್ಷಣೆ ಮಾಡಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ:ಚಿಕ್ಕಬಳ್ಳಾಪುರ ಜಿಲೆಟಿನ್​ ಸ್ಫೋಟದಲ್ಲಿ 6 ಮಂದಿ ಬಲಿ: ಸಾವಿಗೆ ಪಿಎಂ, ಸಿಎಂ, ಗಣಿ ಸಚಿವ ಸಂತಾಪ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.