ಚಿಕ್ಕಬಳ್ಳಾಪುರ: ಪವಿತ್ರ ಬಕ್ರೀದ್ ಹಬ್ಬವನ್ನು ಸಮಸ್ತ ಮುಸ್ಲಿಂ ಬಾಂಧವರು ಶಾಂತಿಯುತವಾಗಿ, ಸರಳವಾಗಿ ಹಾಗೂ ಭಕ್ತಿ ಪೂರ್ವಕವಾಗಿ ಆಚರಿಸಬೇಕು ಎಂದು ಮುಸ್ಲಿಂ ಮುಖಂಡರು ಕರೆ ನೀಡಿದ್ದಾರೆ.
ಬಕ್ರೀದ್ ಹಬ್ಬದಂದು ಪ್ರಾಣಿ ಬಲಿ ನೀಡುವ ಪದ್ಧತಿ ಮೊದಲಿನಿಂದಲೂ ಆಚರಣೆಯಲ್ಲಿ ಇದೆ. ಪ್ರಾಣಿ ಬಲಿ ನೀಡಲು ಇಚ್ಚಿಸುವಂತಹ ಮುಸ್ಲಿಂ ಬಾಂಧವರು ತಮ್ಮ ಮನೆಯ ಆವರಣಗಳಲ್ಲಿ ಬಲಿ ಕೊಡಬೇಕು. ಯಾವುದೇ ಕಾರಣಕ್ಕೂ ಪರಿಸರಕ್ಕೆ ಹಾನಿಯಾಗದಂತೆ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲೆಯ ಜನತೆಗೆ ವಿನಂತಿಸಿದರು.
ಅಷ್ಟೇ ಅಲ್ಲದೆ ಆಯಾ ಪ್ರದೇಶಗಳಲ್ಲಿರುವಂತೆ ಮುಸ್ಲಿಂ ಬಾಂಧವರು ತಮ್ಮ ಅನುಕೂಲಕ್ಕೆ ತಕ್ಕಂತೆ ಸಮಯ ನಿಗದಿ ಮಾಡಿ ತಮ್ಮ ಮಸೀದಿಗಳಲ್ಲಿ ಶ್ರದ್ಧಾ ಭಕ್ತಿಯಿಂದ ನಮಾಜು ನಿರ್ವಹಣೆ ಮಾಡಬೇಕು ಎಂದು ಜಾಮಿಯಾ ಮಸೀದಿ ಅಧ್ಯಕ್ಷ ಮೂನ್‌ಸ್ಟಾರ್ ಗೌಸ್ ಪಾಷಾ ಮನವಿ ಮಾಡಿದ್ದಾರೆ. ಇದೇ ವೇಳೆ, ಜಾಮಿಯಾ ಮಸೀದಿ ಕಾರ್ಯದರ್ಶಿ ಇನಾಯತುಲ್ಲಾ ಮತ್ತು ಇತರ ಸದಸ್ಯರು ಉಪಸ್ಥಿತರಿದ್ದರು.