ಚಿಕ್ಕಬಳ್ಳಾಪುರ: ಹೊಸ ವರ್ಷಾಚರಣೆ ಹಿನ್ನೆಲೆ ನಂದಿಬೆಟ್ಟಕ್ಕೆ ಬರುವ ಪ್ರವಾಸಿಗರಿಗೆ ಜಿಲ್ಲಾಡಳಿತ ಬಿಗ್ ಶಾಕ್ ನೀಡಿದ್ದು, ಮೂರು ದಿನ ಜನರ ಪ್ರವೇಶವನ್ನು ನಿಷೇಧಿಸಿದೆ.
![nandi-hill-entrance-prohibition-for-three-days](https://etvbharatimages.akamaized.net/etvbharat/prod-images/10017632_thum.jpg)
![nandi-hill-entrance-prohibition-for-three-days](https://etvbharatimages.akamaized.net/etvbharat/prod-images/10017632_643_10017632_1608991396405.png)
ಪರಿಸರ ಪ್ರೇಮಿಗಳು, ಪ್ರಕೃತಿ ಪ್ರಿಯರ ಹಾಟ್ ಸ್ಪಾಟ್ ನಂದಿ ಬೆಟ್ಟಕ್ಕೆ ಪ್ರತಿನಿತ್ಯವು ಸಾವಿರಾರು ಸಂಖ್ಯೆಯಲ್ಲಿ ಜನರು ಭೇಟಿ ನೀಡುತ್ತಾರೆ. ಆದರೆ, ಈ ಬಾರಿ ಕೊರೊನಾ ಸೊಂಕಿನ ಹಿನ್ನೆಲೆ ಡಿ.30 ರಿಂದ ಜ.2 ವರೆಗೆ ಮೂರು ದಿನಗಳ ಕಾಲ ನಂದಿಗಿರಿ ಧಾಮಕ್ಕೆ ಪ್ರವಾಸಿಗರಿಗೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಆರ್.ಲತಾ ಆದೇಶ ಹೊರಡಿಸಿದ್ದಾರೆ.
ಹೌದು, ಹೊಸ ವರ್ಷ ಆಚರಣೆ ಹಿನ್ನೆಲೆಯಲ್ಲಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹಾಗೂ ಕೋವಿಡ್ ಸೋಂಕು ಹರಡದಂತೆ ತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ.