ಚಿಕ್ಕಬಳ್ಳಾಪುರ: ಕರ್ನಾಟಕ ರಾಜ್ಯಾದ್ಯಂತ ಪದವಿ ಕಾಲೇಜು ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ನಡೆಯುತ್ತಿರುವ ನ್ಯಾಷನಲ್ ಎಜುಕೇಷನ್ ಪಾಲಿಸಿ ಅಡಿ ನಡೆಯುತ್ತಿರುವ (ಎನ್ಇಪಿ ) ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಶುಕ್ರವಾರ ನಡೆಯಬೇಕಾಗಿರುವ ಎನ್ಇ ಪಿಯ ಪೊಲಿಟಿಕಲ್ ಸೈನ್ಸ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಗುರುವಾರ ರಾತ್ರಿಯೇ ಹೊರಬಿದ್ದಿದೆ.
ಜಿಲ್ಲೆಯ ಬಾಗೇಪಲ್ಲಿ ನ್ಯಾಷನಲ್ ಪದವಿ ಕಾಲೇಜು ವಿದ್ಯಾರ್ಥಿಗಳ ಮೊಬೈಲ್ನಲ್ಲಿ ಪ್ರಶ್ನಿ ಪತ್ರಿಕೆ ಹರಿದಾಡುತ್ತಿದೆ. ಬಾಗೇಪಲ್ಲಿಯ ನ್ಯಾಷನಲ್ ಕಾಲೇಜುನ ಪ್ರಾಧ್ಯಾಪಕ ವೃಂದದಿಂದಲೇ 2022ನೇ ಸಾಲಿನ ಈ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ಅನುಮಾನಗಳು ಮೂಡಿವೆ.
ಓದಿ: ಲೋಕೋಪಯೋಗಿ ಇಲಾಖೆಯ ಜೆಇ, ಎಇ ನೇಮಕಾತಿಯಲ್ಲಿ ಅಕ್ರಮ: ಸಿಐಡಿ ಕಣ್ತಪ್ಪಿಸಿ ಓಡಾಡುತ್ತಿರುವ ಶಿಕ್ಷಕ