ETV Bharat / state

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಹಕ್ಕಿ ಜ್ವರ ಪ್ರಕರಣ ದಾಖಲಾಗಿಲ್ಲ: ಡಿಸಿ ಸ್ಪಷ್ಟನೆ

ಇತ್ತೀಚೆಗೆ ಅಮಾನಿ ಗೋಪಾಲ ಕೃಷ್ಣ ಕೆರೆಯಲ್ಲಿ ಮೃತಪಟ್ಟಿದ್ದ ಹಕ್ಕಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಪರೀಕ್ಷಾ ವರದಿ ಪ್ರಕಾರ ಈ ಹಕ್ಕಿಗಳು ಯಾವುದೇ ಸೋಂಕಿನಿಂದ ಮೃತಪಟ್ಟಿರುವುದಿಲ್ಲ ಎಂದು ದೃಢಪಟ್ಟಿದೆ. ಹಾಗಾಗಿ ಹಕ್ಕಿ ಜ್ವರದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಆರ್. ಲತಾ ತಿಳಿಸಿದರು.

No bird flu cases have been reported in Chikkaballapur district: dc r latha
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಹಕ್ಕಿ ಜ್ವರ ಪ್ರಕರಣ ದಾಖಲಾಗಿಲ್ಲ: ಡಿಸಿ ಸ್ಪಷ್ಟನೆ
author img

By

Published : Jan 8, 2021, 7:26 AM IST

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಈವರೆಗೆ ಹಕ್ಕಿ ಜ್ವರದ ಬಗ್ಗೆ ವರದಿಯಾಗಿಲ್ಲ. ಹಾಗಾಗಿ ಆ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಈಗಾಗಲೇ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಆರ್. ಲತಾ ಸ್ಪಷ್ಟಪಡಿಸಿದ್ದಾರೆ.

ಜಿಲ್ಲಾಧಿಕಾರಿ ಆರ್. ಲತಾ

ಚಿಕ್ಕಬಳ್ಳಾಪುರ ನಗರ ಹೊರವಲಯದ ಅಮಾನಿ ಗೋಪಾಲಕೃಷ್ಣ ಕೆರೆಯಲ್ಲಿ ಗುರುವಾರ ಎರಡು ವಲಸೆ ಪಕ್ಷಿಗಳು ಮೃತಪಟ್ಟಿದ್ದು, ಮೃತಪಟ್ಟ ಹಕ್ಕಿಗಳನ್ನು ಬೆಂಗಳೂರಿನಲ್ಲಿರುವ ಪಶು ಆರೋಗ್ಯ ಮತ್ತು ಜೈವಿಕ ಸಂಶೋಧನಾ ಸಂಸ್ಥೆಯ ಪರೀಕ್ಷಾ ಕೇಂದ್ರಕ್ಕೆ ಕಳುಹಿಸಲಾಗಿದೆ. 25 ದಿನಗಳ ಹಿಂದೆ ಇದೇ ಅಮಾನಿ ಗೋಪಾಲ ಕೃಷ್ಣ ಕೆರೆಯಲ್ಲಿ ಮೃತಪಟ್ಟಿದ್ದ ಎರಡು ಹಕ್ಕಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಪರೀಕ್ಷಾ ವರದಿ ಪ್ರಕಾರ ಈ ಎರಡು ಹಕ್ಕಿಗಳು ಯಾವುದೇ ಸೋಂಕಿನಿಂದ ಮೃತಪಟ್ಟಿರುವುದಿಲ್ಲ ಎಂದು ದೃಢಪಟ್ಟಿದೆ.

ಈ ಸುದ್ದಿಯನ್ನೂ ಓದಿ: ಚಿಕ್ಕಬಳ್ಳಾಪುರದಲ್ಲೂ ಹಕ್ಕಿ ಜ್ವರದ ಭೀತಿ!

ಹಾಗಾಗಿ, ಜಿಲ್ಲೆಯ ನಾಗರಿಕರು ಹಕ್ಕಿ ಜ್ವರದ ಬಗ್ಗೆ ಹೆದರಬೇಕಾಗಿಲ್ಲ. ಈಗಾಗಲೇ ಜಿಲ್ಲೆಯ ಎಲ್ಲ ಕಡೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಮುನ್ನೆಚ್ಚರಿಕೆ ವಹಿಸಲಾಗಿದೆ. ನಾಗರಿಕರು ವದಂತಿಗಳಿಗೆ ಕಿವಿಗೊಡಬಾರದು ಎಂದು ಡಿಸಿ ಮನವಿ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.