ಬಾಗೇಪಲ್ಲಿ: ಗೌರಿ ಗಣೇಶ ಹಬ್ಬದ ಸಂಭ್ರಮದಲ್ಲಿ ಜನರು ಕೊರೊನಾ ಆತಂಕವನ್ನು ಮರೆತು ಹಬ್ಬಕ್ಕೆ ವಸ್ತುಗಳನ್ನು ಖರೀದಿಸಲು ಒಟ್ಟೊಟ್ಟಿಗೆ ನಿಂತ ದೃಶ್ಯ ಕಂಡು ಬಂತು.

ಜನರು ಪಟ್ಟಣದ ಉರ್ದು ಶಾಲೆಯಿಂದ ಮತ್ತು ಕೆಎಸ್ಆರ್ಟಿಸಿ ಬಸ್ ನಿಲ್ದಾಣದವರೆಗೂ ಹಬ್ಬದ ವಸ್ತುಗಳನ್ನು ಕೊಳ್ಳಲು ಗುಂಪುಗೂಡಿದ್ದರು. ಸಾಮಾಜಿಕ ಅಂತರವನ್ನು ಮರೆತು, ಮಾಸ್ಕ್ ಹಾಕಿಕೊಳ್ಳದೆ ಅಗತ್ಯ ವಸ್ತುಗಳನ್ನು ಖರೀದಿ ಮಾಡುವುದರಲ್ಲಿ ಜನರು ಬ್ಯುಸಿಯಾಗಿರುವುದು ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ.
ಪಟ್ಟಣದ ಮುಖ್ಯ ರಸ್ತೆಯಲ್ಲಿ ಜನ ಕೊರೊನಾ ಆತಂಕವನ್ನು ಮರೆತು ಅಜಾಗೃತರಾಗಿ ಮಾಸ್ಕ್ ಧರಿಸದೆ ವ್ಯಾಪಾರ ಮಾಡುತ್ತಿದ್ದಾರೆ. ಆದರೆ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಏನೂ ಕ್ರಮಕೈಗೊಳ್ಳದೇ ಸುಮ್ಮನಿದ್ದಾರೆ.