ETV Bharat / state

ಕಾಂಗ್ರೆಸ್​​ಗೆ ಬಾಹ್ಯ ಬೆಂಬಲ ಘೋಷಿಸಿದ ಪಕ್ಷೇತರ ಶಾಸಕ ಪುಟ್ಟಸ್ವಾಮಿ ಗೌಡ - karnataka politics

ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಗೌರಿಬಿದನೂರು ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಪುಟ್ಟಸ್ವಾಮಿ ಗೌಡ ಅವರು ಕಾಂಗ್ರೆಸ್​ಗೆ ಬಾಹ್ಯ ಬೆಂಬಲ ನೀಡುವುದಾಗಿ ಎಂದು ಅಧಿಕೃತವಾಗಿ ಹೇಳಿಕೆ ನೀಡಿದ್ದಾರೆ.

Gauribidanur Non Party MLA Puttaswamy Gowda
ಗೌರಿಬಿದನೂರು ಪಕ್ಷೇತರ ಶಾಸಕ ಪುಟ್ಟಸ್ವಾಮಿ ಗೌಡ
author img

By

Published : May 16, 2023, 9:46 PM IST

Updated : May 16, 2023, 10:46 PM IST

ಶಾಸಕ ಪುಟ್ಟಸ್ವಾಮಿ ಗೌಡ

ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರು ವಿಧಾನಸಭಾ ಕ್ಷೇತ್ರದಲ್ಲಿ ಕಳೆದ 5 ಬಾರಿ ಶಾಸಕರಾಗಿ ಹ್ಯಾಟ್ರಿಕ್ ಸಾಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಶಿವಶಂಕರ್ ರೆಡ್ಡಿ ಪಕ್ಷೇತರ ಅಭ್ಯರ್ಥಿ ವಿರುದ್ಧ ಈ ಬಾರಿ ಚುನಾವಣೆಯಲ್ಲಿ ಸೋಲು ಅನುಭವಿಸಿದರು. ಶಿವಶಂಕರ್ ರೆಡ್ಡಿ ವಿರುದ್ಧ ಪಕ್ಷೇತರ ಅಭ್ಯರ್ಥಿ ಪುಟ್ಟಸ್ವಾಮಿ ಗೌಡ ಅವರು 30,000ಕ್ಕೂ ಅಧಿಕ ಮತಗಳ ಅಂತರದಿಂದ ಜಯಭೇರಿ ಸಾಧಿಸಿದ್ದು, ಈಗ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುವುದರ ಮೂಲಕ ಮತ್ತೆ ಸುದ್ದಿಯಾಗಿದ್ದಾರೆ.

ಕ್ಷೇತ್ರಕ್ಕೆ ಅನುದಾನ ತರಲು ನಾನು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸೂಚಿಸುವುದಾಗಿ ನೂತನ ಶಾಸಕ ಪುಟ್ಟಸ್ವಾಮಿ ಗೌಡ ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ. ಇನ್ನೂ ಪಕ್ಷೇತರ ಅಭ್ಯರ್ಥಿಯಾಗಿ ಗೆದ್ದ ನಂತರ ಪುಟ್ಟಸ್ವಾಮಿಗೌಡ ಯಾವುದಾದರೂ ಪಕ್ಷಗಳಿಗೆ ಸೇರ್ಪಡೆ ಆಗಲಿದ್ದಾರೆ ಎಂಬ ಮಾತುಗಳು ಕ್ಷೇತ್ರದಲ್ಲಿ ಸಾಕಷ್ಟು ಹರಿದಾಡುತ್ತಿದ್ದವು. ಆದರೆ ಅಧಿಕೃತವಾಗಿ ನಾನು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸೂಚಿಸುವುದಾಗಿ ಹೇಳಿಕೆಯನ್ನು ಈಗ ಕೊಟ್ಟಿದ್ದಾರೆ.

ನಾನು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲವನ್ನು ಮಾತ್ರ ಸೂಚಿಸುತ್ತಿರುವೆ. ಆದರೆ ಯಾವುದೇ ಕಾರಣಕ್ಕೂ ಪಕ್ಷ ಸೇರ್ಪಡೆಗೊಳ್ಳುವುದಿಲ್ಲ ಎಂದು ಸ್ಪಷ್ಟ ಮಾಹಿತಿ ನೀಡಿದ್ದಾರೆ. ಇದೇ ವೇಳೆ ನೂತನ ಶಾಸಕ ಪುಟ್ಟಸ್ವಾಮಿಗೌಡ ಅವರು ಗೌರಿಬಿದನೂರು ಕ್ಷೇತ್ರದ ಜನತೆಗೆ ಧನ್ಯವಾದಗಳು ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿ 5 ಬಾರಿ ಗೆದ್ದಂತಹ ಶಿವಶಂಕರ್ ರೆಡ್ಡಿ ಅವರು 25 ವರ್ಷಗಳಿಂದ ಕ್ಷೇತ್ರವನ್ನು ಅಭಿವೃದ್ಧಿ ಮಾಡಲು ವಿಫಲರಾಗಿದ್ದಾರೆ. ಇದರಿಂದಾಗಿ ಈ ಬಾರಿ ಕ್ಷೇತ್ರದ ಜನತೆ ನನ್ನ 4 ವರ್ಷದ ಸೇವೆಯನ್ನು ಗುರುತಿಸಿ ನನಗೆ ಈ ಬಾರಿ ಶಾಸಕರ ಅಧಿಕಾರವನ್ನು ಕೊಟ್ಟಿದ್ದಾರೆ ಎಂದು ಇದೇ ವೇಳೆ ಶಾಸಕರ ತಿಳಿಸಿದ್ದಾರೆ.

10 ವರ್ಷಗಳಿಂದ ಅಭಿವೃದ್ಧಿ ಮಾಡಿದ್ದರೆ ಯಾಕೆ‌ ಸೋಲುತ್ತಿದ್ದರು ಎಂದ ಪುಟ್ಟಸ್ವಾಮಿ: ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಸಚಿವ ಸುಧಾಕರ್​​ ವಿರುದ್ಧ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರದೀಪ್ ಈಶ್ವರ್ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ. ಗೆಲುವಿನ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದು ಜನಸಾಮಾನ್ಯರ ಗೆಲುವು, ಮಾಜಿ ಸಚಿವ ಸುಧಾಕರ್ ಅವರು ಕಳೆದ 10 ವರ್ಷಗಳಿಂದ ಕ್ಷೇತ್ರದಲ್ಲಿ ಅಭಿವೃದ್ಧಿ ಮಾಡಿದ್ದರೆ ಯಾಕೆ‌ ಸೋಲುತ್ತಿದ್ದರು..? ಅವರ ಸೋಲಿಗೆ ಎಲ್ಲಾ ಮೈನಸ್ ಕಾರಣಗಳಿವೆ ಎಂದು ಟಾಂಗ್​​ ಕೊಟ್ಟರು.

ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಮಾಜಿ ಸಚಿವ ಸುಧಾಕರ್ ಅವರು ನೀಟ್ ಅಕಾಡೆಮಿ ತೆರೆಯುವುದಾಗಿ ಭರವಸೆ ಕೊಟ್ಟಿದ್ದರು. ಆದರೆ ಸೋತ ನಂತರ ಸುಮ್ಮನಿರದೇ ನೀಟ್ ಅಕಾಡೆಮಿ ಸ್ಥಾಪಿಸಬೇಕು. ಇದರಿಂದ ಸಾಕಷ್ಟು ಬಡ ವಿದ್ಯಾರ್ಥಿಗಳಿಗೆ ಸಹಾಯ ಆಗುತ್ತದೆ. ಇನ್ನು ನನ್ನ ಗೆಲುವಿಗೆ ಮಾಜಿ ಸಚಿವ ಶಿವಶಂಕರ್ ರೆಡ್ಡಿ ಹಾಗೂ ಚಿಂತಾಮಣಿ ಹಾಲಿ ಶಾಸಕ ಎಂ.ಸಿ. ಸುಧಾಕರ್ ಮುಖ್ಯ ಕಾರಣಕರ್ತರಾಗಿದ್ದಾರೆ. ಕ್ಷೇತ್ರದ ಜನತೆಯ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದು ಬಗೆಹರಿಸಲಾಗುವುದೆಂದು ಭರವಸೆಯನ್ನು ನೀಡಿದರು.

ಇದನ್ನೂಓದಿ:ಕೇಂದ್ರ ಸಚಿವ ಗಡ್ಕರಿಗೆ ಮತ್ತೆ ಬೆದರಿಕೆ ಕರೆ: ನಾಲ್ಕು ತಿಂಗಳಲ್ಲಿ 3 ಬಾರಿ ಧಮ್ಕಿ

Last Updated : May 16, 2023, 10:46 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.