ಚಿಕ್ಕಬಳ್ಳಾಪುರ: ನಗರದ ವಿವಿಧೆಡೆ ಪರವಾನಗಿ ಇಲ್ಲದೆ ಚಿಕಿತ್ಸೆ ನೀಡುತ್ತಿದ್ದ ನಕಲಿ ಕ್ಲಿನಿಕ್ಗಳ ಮೇಲೆ ಜಿಲ್ಲಾ ಆರೋಗ್ಯ ಅಧಿಕಾರಿಗಳು, ತಾಲೂಕು ಅಧಿಕಾರಿಗಳು ದಾಳಿ ನಡೆಸಿ ಕ್ಲಿನಿಕ್ಗಳನ್ನು ಬಂದ್ ಮಾಡಿಸಿದ್ದಾರೆ.
ನಕಲಿ ವೈದ್ಯರ ಹಾವಳಿ ಬಗ್ಗೆ ಈಟಿವಿ ಭಾರತ ಸುದ್ದಿ ಪ್ರಸಾರ ಮಾಡಿದ ಬಳಿಕ, ಡಿಎಚ್ಒ ಇಂದಿರಾ ಕಬಾಡೆಯವರ ಗಮನಕ್ಕೂ ತರುವ ಕೆಲಸ ಮಾಡಿತ್ತು. ಈ ವರದಿಯಿಂದ ತಕ್ಷಣವೇ ಎಚ್ಚೆತ್ತುಕೊಂಡು ಡಿಎಚ್ಒ ಹಲವು ನಕಲಿ ಕ್ಲಿನಿಕ್ಗಳ ಮೇಲೆ ದಾಳಿ ಮಾಡುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದರು. ಕೊರೊನಾವನ್ನೆ ಬಂಡವಾಳ ಮಾಡಿಕೊಂಡ ನಕಲಿ ಕ್ಲಿನಿಕ್ಗಳು, ಜನರಿಂದ ಹಣ ಪಡೆದು ವಂಚಿಸುತ್ತಿದ್ದರು. ಈಗ ಇಂತಹ ಕ್ಲಿನಿಕ್ಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿ ಅವುಗಳನ್ನು ಬಂದ್ ಮಾಡಿಸಿದ್ದಾರೆ.
ಇದನ್ನೂ ಓದಿ: ತಿರುಪತಿಯಲ್ಲಿ ಆಕ್ಸಿಜನ್ ಕೊರತೆ: 11 ಕೋವಿಡ್ ಸೋಂಕಿತರು ಸಾವು!