ETV Bharat / state

ಅಡುಗೆ ಅನಿಲ ಸೋರಿಕೆಯಾಗಿ ಸಿಲಿಂಡರ್‌ ಸ್ಫೋಟ; ಮನೆ ಮಾಲೀಕ ಸಾವು - ಅಡುಗೆ ಅನಿಲ ಸ್ಫೋಟ

ಗೃಹಬಳಕೆಯ ಎಲ್‍ಪಿಜಿ ಸಿಲಿಂಡರ್ ಸ್ಫೋಟಗೊಂಡು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಪತ್ನಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Old man dead after cylinder blast in Chikkaballapura
ಅಡುಗೆ ಅನಿಲ ಸೋರಿಕೆಯಾಗಿ ಸ್ಫೋಟ
author img

By

Published : May 20, 2022, 2:27 PM IST

ಚಿಕ್ಕಬಳ್ಳಾಪುರ: ಗೃಹಬಳಕೆಯ ಎಲ್‍ಪಿಜಿ ಸಿಲಿಂಡರ್ ಸ್ಫೋಟಗೊಂಡು ವ್ಯಕ್ತಿಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಮ್ಯಾಕಲಪಲ್ಲಿ ಗ್ರಾಮದಲ್ಲಿ ನಡೆದಿದೆ. ಲಕ್ಷ್ಮಣ (62) ಮೃತಪಟ್ಟ ವ್ಯಕ್ತಿ. ಇಂದು ಬೆಳಗಿನ ಜಾವ ಘಟನೆ ಸಂಭವಿಸಿದೆ.

ಅಡುಗೆ ಅನಿಲ ಸೋರಿಕೆಯಾಗಿದ್ದರಿಂದ ಈ ದುರಂತ ಸಂಭವಿಸಿದೆ. ಇಡೀ ಮನೆಯೇ ಸಂಪೂರ್ಣ ಛಿದ್ರ, ಛಿದ್ರವಾಗಿದೆ. ಘಟನೆಯ ವೇಳೆ ಅಲುವೇಲಮ್ಮ ಮನೆ ಮುಂದೆ ಸಾರಿಸಲೆಂದು ಹೊರಗೆ ಹೋಗಿದ್ದರಿಂದ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚೇಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.