ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೊಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಇಂದು 20 ಸೋಂಕಿತರು ಪತ್ತೆಯಾಗಿ ಓರ್ವ ಸೋಂಕಿಗೆ ಬಲಿಯಾಗಿದ್ದಾನೆ.
ಚಿಕ್ಕಬಳ್ಳಾಪುರ ತಾಲೂಕು ವ್ಯಾಪ್ತಿಯಲ್ಲಿ 9 ಸೋಂಕಿತರು, ಗೌರಿಬಿದನೂರು ತಾಲೂಕು ವ್ಯಾಪ್ತಿಯ 6, ಬಾಗೇಪಲ್ಲಿಯಲ್ಲಿ ಐವರು ಸೋಂಕಿತರು ಪತ್ತೆಯಾಗಿದ್ದಾರೆ. ಇದರಲ್ಲಿ 10 ಮಂದಿ ಸೋಂಕಿತರು ಬೆಂಗಳೂರು ಪ್ರಯಾಣ ಬೆಳೆಸಿದ್ದ ಹಿನ್ನೆಲೆ ಸೋಂಕು ದೃಢಪಟ್ಟಿದ್ದು, ಮೂವರು ಸೋಂಕಿತರು ಆಂಧ್ರದ ನಂಟನ್ನು ಹೊಂದಿದ್ದಾರೆ.
ಐಎಲ್ಐನಿಂದ ಇಬ್ಬರು ಸೋಂಕಿತರಿಗೆ ಹಾಗೂ ಸೋಂಕಿತರ ಸಂಪರ್ಕದಿಂದ 5 ಜನರಿಗೆ ಸೋಂಕು ಅಂಟಿಕೊಂಡಿದೆ. ಇಂದು ಓರ್ವ ಸೋಂಕಿತ ಸಾವನ್ನಪ್ಪಿದ್ದು ಸಾವಿನ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.
ಒಟ್ಟು 5 ಮಂದಿ ಸೋಂಕಿತರು ಸಂಪೂರ್ಣ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಸದ್ಯ ಸೋಂಕಿತರಿಗೆ ಜಿಲ್ಲೆಯ ಐಸೋಲೇಷನ್ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.