ಚಿಕ್ಕಬಳ್ಳಾಪುರ: ಟ್ರ್ಯಾಕ್ಟರ್ ಚಾಲಕನ ಅತಿವೇಗದಿಂದ ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಶಂಬೂಕನಗರ ಬಳಿ ನಡೆದಿದೆ.
ಕಲಿದೇವನಪುರ ಗ್ರಾಮದ ಮೋಹನ್ (25) ಅಪಘಾತದಲ್ಲಿ ಮೃತಪಟ್ಟ ಯುವಕ.
ಮತ್ತೋರ್ವ ಹಿಂಬದಿ ಸವಾರ ಸುಭ್ರಮಣಿಗೆ ಗಾಯಗಳಾಗಿದ್ದು ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಂತರ ಗಾಯಾಳುಗಳನ್ನು ಸ್ಥಳೀಯರ ಸಹಕಾರದಿಂದ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕಳುಹಿಸಲಾಗಿತ್ತು. ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೇ ಮೋಹನ್ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದೂರು ದಾಖಲಾಗಿದೆ.