ಚಿಕ್ಕಬಳ್ಳಾಪುರ: ಕಾರು ಮತ್ತು ಬೈಕ್ ಮುಖಾಮುಖಿ ಡಿಕ್ಕಿ ಹೊಡೆದು ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಬೊಮ್ಮನಹಳ್ಳಿ ಸಮೀಪ ನಡೆದಿದೆ.
ಶಿಡ್ಲಘಟ್ಟ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 234 ರ ಬೊಮ್ಮನಹಳ್ಳಿ ಸಮೀಪ ಈ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನ ಸವಾರ ವೀರಪುರದ ಗಗನ್ (20) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತಿಬ್ಬರಲ್ಲಿ ಒಬ್ಬರಿಗೆ ಕಾಲು ಮುರಿದಿದ್ದು, ಮತ್ತೊಬ್ಬ ಗಂಭೀರ ಗಾಯಗೊಂಡಿದ್ದಾನೆ. ಗಾಯಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.
ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.