ETV Bharat / state

ಬಾಗೇಪಲ್ಲಿ: ಗ್ರಾಮ ಪಂಚಾಯತ್​​ ನೌಕರರ ಬೇಡಿಕೆ ಈಡೇಸುವಂತೆ ಒತ್ತಾಯಿಸಿ ಪ್ರತಿಭಟನೆ - panchayat employees Protest

ಗ್ರಾಮ ಪಂಚಾಯತ್​​ ನೌಕರರ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಬಾಗೇಪಲ್ಲಿ ತಾಲೂಕು ಪಂಚಾಯತ್​ ಮೂಲಕ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಲಾಯಿತು.

panchayat employees Protest In Baghepalli
ಬಾಗೇಪಲ್ಲಿ: ಗ್ರಾಮ ಪಂಚಾಯಿತಿ ನೌಕರರ ಬೇಡಿಕೆ ಈಡೇಸುವಂತೆ ಒತ್ತಾಯಿಸಿ ಪ್ರತಿಭಟನೆ
author img

By

Published : Jul 10, 2020, 8:06 PM IST

ಬಾಗೇಪಲ್ಲಿ (ಚಿಕ್ಕಬಳ್ಳಾಪುರ): ಗ್ರಾಮ ಪಂಚಾಯತ್​​​ ನೌಕರರ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಸಿಐಟಿಯು ಸಂಯೋಜಿತ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್​ ನೌಕರರ ಸಂಘದ ಆಶ್ರಯದಲ್ಲಿ ಬಾಗೇಪಲ್ಲಿ ತಾಲೂಕು ಪಂಚಾಯತ್​​ ಕಾರ್ಯಾಲಯದ ಮುಂದೆ ಪ್ರತಿಭಟನೆ ನಡೆಸಲಾಯಿತು.

ಬಾಗೇಪಲ್ಲಿ: ಗ್ರಾಮ ಪಂಚಾಯತ್​ ನೌಕರರ ಬೇಡಿಕೆ ಈಡೇಸುವಂತೆ ಒತ್ತಾಯಿಸಿ ಪ್ರತಿಭಟನೆ

ಈ ವೇಳೆ ಮಾತನಾಡಿದ ಗ್ರಾಮ ಪಂಚಾಯತ್​ ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ರಾಮಕೃಷ್ಣ, ರಾಜ್ಯದ 6,024 ಗ್ರಾಮ ಪಂಚಾಯತ್​ಗಳಲ್ಲಿ ಕೆಲಸ ನಿರ್ವಹಿಸುತ್ತಿರುವ 65 ಸಾವಿರ ಸಿಬ್ಬಂದಿಗೆ ವಾರ್ಷಿಕ 900 ಕೋಟಿ ರೂ. ಹಣ ಬೇಕಾಗಿರುತ್ತದೆ ಎಂದು ಅಂದಾಜಿಸಲಾಗಿದೆ. ಅದರಲ್ಲೂ 518 ಕೋಟಿ ಮಾತ್ರ ಹಣಕಾಸು ಇಲಾಖೆ ಮಂಜೂರು ಮಾಡಿರುತ್ತದೆ. ಕಳೆದ ಎರಡು ವರ್ಷಗಳಿಂದ ಎಂಟು ತಿಂಗಳ ವೇತನ ಬಾಕಿಯಿದೆ. ಸಮಯಕ್ಕೆ ಸರಿಯಾಗಿ ವೇತನ ಸಿಗದ ಕಾರಣ ಬಾಗೇಪಲ್ಲಿ ತಾಲೂಕಿನ ಗ್ರಾಮ ಪಂಚಾಯತ್​ ಸಿಬ್ಬಂದಿ ವರ್ಗ ತೀವ್ರ ಸ್ವರೂಪದ ಸಮಸ್ಯೆಗಳನ್ನ ಅನುಭವಿಸುತ್ತಿದ್ದಾರೆ. ಹೀಗಾಗಿ ಕೂಡಲೇ ಗ್ರಾಮ ಪಂಚಾಯತ್​ ನೌಕರರ ವೇತನ ನೀಡಬೇಕು ಎಂದು ಒತ್ತಾಯಿಸಿದರು.

ಬಳಿಕ ಗ್ರಾಮ ಪಂಚಾಯತ್​ ನೌಕರರ ಬೇಡಿಕೆ ಈಡೇರಿಸುವಂತೆ ತಾಲೂಕು ಪಂಚಾಯತ್​​ ಮೂಲಕ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಲಾಯಿತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.