ಗೌರಿಬಿದನೂರು: ಕೊರೊನಾ ಸೋಂಕಿನಿಂದ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರತ್ಯೇಕ ನಿಗಾದಲ್ಲಿ 40 ಮಂದಿ ಶಂಕಿತ ಸೋಂಕಿತರನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಗಿದೆ.
ಆಸ್ಪತ್ರೆಯಲ್ಲಿ ನಿಗಾದಲ್ಲಿ ಗ್ರಾಮಾಂತರ ಎಸ್ಐ ಮೋಹನ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್, ಅಂದನೂರು ಗ್ರಾಮದ ಕೊರೊನಾ ವಾರಿಯರ್ಸ್, 12 ಜನ ಪೊಲೀಸ್ ಸಿಬ್ಬಂದಿ ಸೇರಿದಂತೆ 40 ಮಂದಿ ಬಿಡುಗಡೆಗೊಂಡಿದ್ದಾರೆ.
ಗುಣಮುಖರಾದವರಿಗೆ ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತರು, ಪೊಲೀಸ್ ಸಿಬ್ಬಂದಿ ಸೇರಿ ಹೂಮಳೆ ಸುರಿಸಿ, ಚಪ್ಪಾಳೆ ತಟ್ಟುವ ಮೂಲಕ ಆತ್ಮೀಯವಾಗಿ ಬೀಳ್ಕೊಟ್ಟಿದ್ದಾರೆ.