ಬಾಗೇಪಲ್ಲಿ: ಸಾಮಾಜಿಕ ಅಂತರ, ಮಾಸ್ಕ್ ಧರಿಸದೆ ಓಡಾಡುವವರಿಗೆ ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಪಟ್ಟಣದಲ್ಲಿ ಪೊಲೀಸರು 200 ರೂಪಾಯಿ ದಂಡ ವಿಧಿಸಿ ಬಿಸಿ ಮುಟ್ಟಿಸಿದ್ದಾರೆ.
ಕೋವಿಡ್-19 ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ತಾಲೂಕಿನಲ್ಲಿ ಪ್ರಕರಣಗಳು ಹೆಚ್ಚಾಗುತ್ತಿದ್ದರೂ ಸಹ ಸಾರ್ವಜನಿಕರಿಗೆ ಅರಿವಾಗುತ್ತಿಲ್ಲ. ಈ ಹಿನ್ನೆಲೆ ಮುಖ್ಯ ರಸ್ತೆಗಿಳಿದ ಪೊಲೀಸರು ಕೋವಿಡ್ ನಿಯಮ ಉಲ್ಲಂಘಿಸಿದವರಿಗೆ ದಂಡ ವಿಧಿಸಿದ್ದಾರೆ.
ಅಧಿಕಾರಿಗಳು ಸಾರ್ವಜನಿಕರಿಗೆ ಕೊರೊನಾ ಬಗ್ಗೆ ಅರಿವು ಮೂಡಿಸಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಪಾಲಿಸುವಂತೆ ಮನವಿ ಸಹ ಮಾಡಿದ್ದಾರೆ.