ETV Bharat / state

ಕೊರೊನಾ ನಿಯಮ ಉಲ್ಲಂಘಿಸಿದವರಿಗೆ ಬಿತ್ತು ದಂಡ: ನಗರಸಭೆ ಆಯುಕ್ತರ ನಡೆಗೆ ಎಲ್ಲೆಡೆ ಮೆಚ್ಚುಗೆ

author img

By

Published : Jul 18, 2020, 9:43 PM IST

ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಾಪಾಡದ ಸಾರ್ವಜನಿಕರಿಗೆ ಹಾಗೂ ಅಂಗಡಿ ಮಾಲೀಕರಿಗೆ ಜಿಲ್ಲೆಯ ಗೌರಿಬಿದನೂರಿನ ನಗರಸಭೆ ಆಯುಕ್ತರು ರಸ್ತೆಗಿಳಿದು ಫೈನ್ ವಿಧಿಸಿದ್ದಾರೆ.

Penalties for violating the Corona Rule
ಕೊರೊನಾ ನಿಯಮ ಉಲ್ಲಂಘಿಸಿದವರಿಗೆ ಬಿತ್ತು ದಂಡ:

ಚಿಕ್ಕಬಳ್ಳಾಪುರ: ಕೊರೊನಾ ತಡೆಗಟ್ಟಲು ಸರ್ಕಾರ ಸಾಕಷ್ಟು ಶ್ರಮವಹಿಸಿ ಸೊಂಕಿತ ಸ್ಥಳಗಳಿಗೆ ತೆರಳಿ, ಮನೆಯಿಂದ ಹೊರಗೆ ಬರದಂತೆ ಹಾಗೂ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಾಪಾಡುವಂತೆ ರಾಜ್ಯದ ಜನತೆಗೆ ಮುನ್ನೆಚ್ಚರಿಕೆ ಕ್ರಮಗಳನ್ನು ನೀಡಿದರು ಯಾವುದೇ ಪ್ರಯೋಜನವಿಲ್ಲದಂತಾಗಿದೆ.

ಆದ್ದರಿಂದ ಗೌರಿಬಿದನೂರು ನಗರದಲ್ಲಿ ಮಾಸ್ಕ್ ಹಾಗೂ ಸಾಮಾಜಿಕ‌ ಅಂತರ ಕಾಪಾಡದ ಸಾರ್ವಜನಿಕರಿಗೆ ಹಾಗೂ ಅಂಗಡಿ ಮಾಲೀಕರಿಗೆ ನಗರಸಭೆ ಆಯುಕ್ತ ಚಲಪತಿ ಸ್ವಯಂ ರಸ್ತೆಗಿಳಿದು, ದಂಡ ವಿಧಿಸಿದ್ದಾರೆ.

ಕೊರೊನಾ ನಿಯಮ ಉಲ್ಲಂಘಿಸಿದವರಿಗೆ ಬಿತ್ತು ದಂಡ

ಪೌರಾಯುಕ್ತರು ಹಾಗೂ ಸರ್ಕಲ್ ಇನ್ಸ್​​ಪೆಕ್ಟರ್ ರವಿ ನೇತೃತ್ವದಲ್ಲಿ ದಿಢೀರ್ ದಾಳಿ ಮಾಡಿ, ಸರ್ಕಾರದ ನಿಯಮಗಳನ್ನು ಪಾಲಿಸದ ಅಂಗಡಿಗಳ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದಾರೆ. ಇನ್ನು ಸರಿ ಸುಮಾರು 63 ಸಾವಿರ ದಂಡ ವಸೂಲಿ ಮಾಡಿದ್ದು, ಹೋಟೆಲ್‌ಗಳಲ್ಲಿ ಪಾರ್ಸಲ್‌ಗೆ ಮಾತ್ರ ಅವಕಾಶವಿದ್ದರೂ ವ್ಯಾಪಾರ ನಡೆಸುತ್ತಿದ್ದ ಮಾಲೀಕರ ವಿರುದ್ಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.