ಚಿಕ್ಕಬಳ್ಳಾಪುರ: ಎನ್ಆರ್‌ಸಿ ಹಾಗೂ ಸಿಎಎ ಕಾಯ್ದೆ ವಿರೋಧಿಸಿ ನಗರದಲ್ಲಿ ನಡೆದ ಬೃಹತ್ ಪ್ರತಿಭಟನೆ ಶಾಂತಿಯುತವಾಗಿ ಮುಕ್ತಾಯ ಕಂಡಿತು. ಪ್ರತಿಭಟನೆ ಮುಗಿದ ನಂತರ ಪ್ರತಿಭಟನಾಕಾರರು ಜಿಲ್ಲಾ ವರಿಷ್ಠಾಧಿಕಾರಿ ಜೊತೆ ಸೆಲ್ಫಿಗೆ ಮುಗಿಬಿದ್ದ ದೃಶ್ಯ ಕಂಡುಬಂತು.
ಚಿಕ್ಕಬಳ್ಳಾಪುರದ ಜಿಲ್ಲಾಡಳಿತದ ಮುಂದೆ ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಜನ ಪೌರತ್ವ ಕಾಯ್ದೆಯನ್ನು ವಿರೋಧಿಸಿ ಶಾಂತಿಯುತವಾಗಿ ಮಂಗಳವಾರ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ನಂತರ ಜಿಲ್ಲಾಧಿಕಾರಿ ಸೇರಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ಪ್ರತಿಭಟನಾಕಾರರು ಧನ್ಯವಾದ ತಿಳಿಸಿದರು. ಈ ವೇಳೆ ಪೊಲೀಸ್ ವರಿಷ್ಠಾಧಿಕಾರಿ ಅಭಿನವ್ ಖರೆ ಅವರೊಂದಿಗೆ ಸೆಲ್ಫಿಗೆ ಮುಗಿಬಿದ್ದರು.