ಚಿಕ್ಕಬಳ್ಳಾಪುರ: ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟವನ್ನು ಹತ್ತಿಕ್ಕುವ ಕೇಂದ್ರ ಸರ್ಕಾರದ ವಿರುದ್ಧ ರಾಷ್ಟ್ರೀಯ ಹೆದ್ದಾರಿ ತಡೆಯನ್ನು ಚಿಕ್ಕಬಳ್ಳಾಪುರ ಜಿಲ್ಲೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಪ್ರತಿಭಟನೆ ನಡೆಸಲಾಯ್ತು.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಭೈರೇಗೌಡ ನೇತೃತ್ವದಲ್ಲಿ ನಗರ ಹೊರವಲಯದ ವಾಪಸಂದ್ರದ ಬಳಿಯ ರಾಷ್ಟ್ರೀಯ ಹೆದ್ದಾರಿ 7ರ ಮಂಚನಬಲೆ ಅಂಡರ್ ಪಾಸ್ ಬಳಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ರು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ದ ಧಿಕ್ಕಾರಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಪ್ರತಿಭಟನಾ ನಿರತರನ್ನು ಪೊಲೀಸರು ಬಂಧಿಸಿದ್ದಾರೆ.