ಚಿಕ್ಕಬಳ್ಳಾಪುರ: ಮನೆಯಲ್ಲಿಯೇ ವೇಶ್ಯಾವಾಟಿಕೆ ನಡೆಸುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿರುವ ಘಟನೆ ಜಿಲ್ಲೆಯ ಚಿಂತಾಮಣಿ ನಗರದಲ್ಲಿ ನಡೆದಿದೆ.
ನಗರದ ಟ್ಯಾಂಕ್ ಬಂಡ್ ರಸ್ತೆಯ ಸುದ್ದಗುಂಡೆ ಬಡಾವಣೆಯಲ್ಲಿ ಹಲವಾರು ತಿಂಗಳಿನಿಂದ ವೇಶ್ಯಾವಾಟಿಕೆ ದಂಧೆ ನಡೆಯುತ್ತಿತ್ತು. ಈ ಕುರಿತು ಖಚಿತ ಮಾಹಿತಿ ಮೇಲೆ ಡಿವೈಎಸ್ಪಿ ಶ್ರೀನಿವಾಸ್ ನೇತೃತ್ವದಲ್ಲಿ ಮನೆ ಮೇಲೆ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಇಬ್ಬರು ಯುವಕರು ಸೇರಿದಂತೆ ಒಬ್ಬ ಯುವತಿ ಸಿಕ್ಕಿ ಬಿದ್ದಿದ್ದು, ಅವರನ್ನು ಪೊಲೀಸರು ಬಂಧಿಸಿದ್ದಾರೆ.
ವೇಶ್ಯಾವಾಟಿಕೆಯನ್ನೆ ವೃತ್ತಿಯಾಗಿಸಿಕೊಂಡಿರುವ ಕೆಲವು ಮಹಿಳೆಯರು ಹಾಗೂ ಪುರುಷರು ಕಾಲೇಜು ಹುಡುಗಿಯರನ್ನು ಟಾರ್ಗೆಟ್ ಮಾಡಿ ದಂಧೆ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ. ವೇಶ್ಯಾವಾಟಿಕೆ ಆರೋಪದಡಿ ಮೂವರನ್ನು ಮೇಲೆ ದೂರು ದಾಖಲಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಇನ್ನೂ ಈ ವಿಷಯಕ್ಕೆ ಸಂಬಂಧಿಸಿದಂತೆ ಚಿಂತಾಮಣಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.