ಚಿಕ್ಕಬಳ್ಳಾಪುರ: ಕೌಟುಂಬಿಕ ಕಲಹದ ಹಿನ್ನೆಲೆ ಪೊಲೀಸ್ ಕಾನ್ಸ್ಟೇಬಲ್ ಪತ್ನಿ ನೇಣಿಗೆ ಶರಣಾಗಿದ್ದು, ಪತಿ ಕಾನ್ಸ್ಟೇಬಲ್ ಆತ್ಮಹತ್ಯೆಗೆ ಯತ್ನಿಸಿ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿರುವ ಘಟನೆ ಅಣಕನೂರು ಗ್ರಾಮದಲ್ಲಿ ನಡೆದಿದೆ.
ಗಂಡ-ಹೆಂಡತಿ ನಡುವೆ ಜಗಳವಾಗಿ ಅದು ತಾರಕಕ್ಕೆರಿದೆ. ಈ ವೇಳೆ ಮನಸ್ತಾಪಗೊಂಡ ಕಾನ್ಸ್ಟೇಬಲ್ ಪತ್ನಿ ಸ್ನೇಹಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೆಂಡ್ತಿ ಆತ್ಮಹತ್ಯೆ ಮಾಡಿಕೊಂಡಿರುವುದನ್ನು ನೋಡಿದ ಕಾನ್ಸ್ಟೇಲಬ್ ಸುರೇಂದ್ರ ಸಹ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಓದಿ: ಉಭಯ ಸದನದಲ್ಲಿ ಕರ್ನಾಟಕ ಸ್ಟಾಂಪ್, ಕ್ರಿಮಿನಲ್ ಕಾನೂನು ತಿದ್ದುಪಡಿ ವಿಧೇಯಕಗಳ ಮಂಡನೆ
ಕೈಕೊಯ್ದುಕೊಂಡು ನರಳಾಡುತ್ತಿದ್ದ ಸುರೇಂದ್ರನನ್ನು ನೆರೆಹೊರೆಯವರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೆಚ್ಚು ರಕ್ತಸ್ರಾವವಾಗಿದ್ದರಿಂದ ಸುರೇಂದ್ರ ಆಸ್ಪತ್ರೆಯಲ್ಲಿ ಸಾವು-ಬದುಕಿನ ಮಧ್ಯೆ ಹೋರಾಟ ನಡೆಸಿದ್ದಾರೆ ಎನ್ನಲಾಗಿದೆ.
ಸುದ್ದಿ ತಿಳಿದಾಕ್ಷಣ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ಕೈಗೊಂಡರು. ಬಳಿಕ ಸ್ನೇಹಾ ಮೃತದೇಹವನ್ನ ಮರಣೋತ್ತರ ಪರೀಕ್ಷೆಗಾಗಿ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ರವಾನಿಸಿದರು.
ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಮೃತಳ ಪೋಷಕರು ಹಾಗೂ ಸಂಬಂಧಿಕರ ಆಗಮನಕ್ಕಾಗಿ ಕಾದಿದ್ದು, ಪೋಷಕರ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲು ಮುಂದಾಗಿದ್ದಾರೆ.