ಚಿಕ್ಕಬಳ್ಳಾಪುರ: ಕಾಲೇಜು ವಿದ್ಯಾರ್ಥಿನಿಯರ ರಕ್ಷಣೆಗಾಗಿ ಇಲ್ಲಿನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೊಸದೊಂದು ಪ್ಲಾನ್ ಮಾಡಿದ್ದಾರೆ. ಮಹಿಳೆಯರು ಮತ್ತು ವಿದ್ಯಾರ್ಥಿನಿಯರನ್ನು ಪುಂಡ -ಪೋಕರಿಗಳಿಂದ ರಕ್ಷಿಸಲು ಚಿಂತಾಮಣಿಯಲ್ಲಿ ಓಬವ್ವ ಪಡೆಯನ್ನು ರಚಿಸಲಾಗಿದೆ.
ಜಿಲ್ಲೆಯ ಚಿಂತಾಮಣಿ ನಗರದಲ್ಲಿ ಹೆಚ್ಚಿನ ವಿದ್ಯಾರ್ಥಿನಿಯರು ಶಿಕ್ಷಣ ಪಡೆಯುತ್ತಿರುವುದು ಜಿಲ್ಲೆಯ ಹೆಗ್ಗಳಿಕೆ. ಇದರ ಸಲುವಾಗಿಯೇ ವಿದ್ಯಾರ್ಥಿನಿಯರು ಹಾಗೂ ಮಹಿಳೆಯರ ರಕ್ಷಣೆಗಾಗಿ ಓಬವ್ವ ಪಡೆಯನ್ನು ರಚಿಸಿ ಅವರ ರಕ್ಷಣೆಗೆ ಪೊಲೀಸ್ ಇಲಾಖೆ ಮುಂದಾಗಿದೆ.
ಶಾಲಾ-ಕಾಲೇಜು ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡುತ್ತಿರುವವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಮುಂದಿನ ದಿನಗಳಲ್ಲಿ ಮಹಿಳೆಯರಿಗೆ ಇದು ಹೆಚ್ಚು ಉಪಯುಕ್ತವಾಗಲಿದೆ ಎಂದು ಡಿವೈಎಸ್ಪಿ ಶ್ರೀನಿವಾಸ್ ತಿಳಿಸಿದರು.
ಈ ಸಂದರ್ಭದಲ್ಲಿ ಡಿವೈಎಸ್ಪಿ ಸೇರಿದಂತೆ ನಗರ ಠಾಣೆ ಇನ್ಸ್ಪೆಕ್ಟರ್ ನಾರಾಯಣಸ್ವಾಮಿ ಸೇರಿದಂತೆ ಸಿಬ್ಬಂದಿ ಹಾಜರಿದ್ದರು.