ಚಿಕ್ಕಬಳ್ಳಾಪುರ : ಪೊಲೀಸರೇ ಹಲ್ಲೆ ಮಾಡಿ ಬೈಕ್ ಸವಾರರ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂಬ ಆರೋಪ ಪ್ರಕರಣವೊಂದು ಬೆಳಕಿಗೆ ಬಂದಿದೆ.
ಚಿಂತಾಮಣಿ ತಾಲೂಕು ತಿಮ್ಮಸಂದ್ರದ ಬಳಿ ಈ ಘಟನೆ ನಡೆದಿದೆ. ಚಿಂತಾಮಣಿ ಗ್ರಾಮಾಂತರ ಪೊಲೀಸರು ವಾಹನ ತಪಾಸಣೆ ನಡೆಸುತ್ತಿರುವ ವೇಳೆ ಹೆಲ್ಮೆಟ್ ಇಲ್ಲದೆ ಬಂದ ಇಬ್ಬರನ್ನು ತಡೆದಿದ್ದರು. ಈ ವೇಳೆ ಮಾತಿನ ಚಕಮಕಿ ನಡೆದು ಬೈಕ್ ಸವಾರನೋರ್ವನ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅಲ್ಲದೆ, ಆಸ್ಪತ್ರೆಗೆ ಹೋಗುತ್ತಿರುವುದಾಗಿ ತಿಳಿಸಿ ಗೋಗೆರದರೂ ತಡೆದು ನಿಲ್ಲಿಸಿ ಬೈಕ್ ಸವಾರರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎನ್ನಲಾಗ್ತಿದೆ.
ಕರ್ತವ್ಯಕ್ಕೆ ಅಡ್ಡಿಪಡಿಸಿ ತಮೆಗೆ ಅವಾಜ್ ಹಾಕಿದ್ದಾರೆಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪ್ರಸಾದ್ ಎಂಬುವನನ್ನು ವಶಕ್ಕೆ ಪಡೆದಿದ್ದಾರೆ. ಬೈಕ್ ಸವಾರ ಪೊಲೀಸ್ಗೆ ಅವಾಜ್ ಹಾಕಿದ್ದವನಿಗೆ ಒಂದು ಏಟು ನೀಡಿರುವ ದೃಶ್ಯವನ್ನು ಸ್ಥಳದಲ್ಲಿದ್ದವರು ಮೊಬೈಲ್ ನಲ್ಲಿ ಸೆರೆ ಹಿಡಿದು ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ.