ಚಿಕ್ಕಬಳ್ಳಾಪುರ: ಅಯೋಧ್ಯೆ ಭೂಮಿ ಪೂಜೆ ಹಿನ್ನೆಲೆಯಲ್ಲಿ ಜಿಲ್ಲೆಯ ಐದು ದೇವಸ್ಥಾನಗಳಲ್ಲಿ ಮಾತ್ರ ಪೂಜಾ ಕೈಂಕರ್ಯಗಳನ್ನು ನೆರವೇರಿಸಲು ಅನುವು ಮಾಡಿಕೊಡಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ತಿಳಿಸಿದ್ದಾರೆ.
ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಾಲೂಕು ಮಟ್ಟದಲ್ಲಿ ಪ್ರಮುಖ ಸಂಘಟನೆಗಳು, ಸಂಘ ಸಂಸ್ಥೆಗಳಿಗೆ ಕೆಲವು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಗಿದೆ. ನಾಳೆ ದೇವಸ್ಥಾನದಲ್ಲಿ ಪೂಜೆ ಮಾಡಲು ಮನವಿ ಮಾಡಿದ್ದರು. ಹೀಗಾಗಿ ಆಯ್ದ ದೇವಸ್ಥಾನಗಳಲ್ಲಿ ಪೂಜೆಗೆ ಅನುಮತಿಸಲಾಗಿದೆ. ನಾಳೆ ಯಾವುದೇ ರ್ಯಾಲಿ, ಸಂಭ್ರಮಾಚರಣೆಗಳನ್ನು ಮಾಡುವಂತಿಲ್ಲ ಎಂದು ಅವರು ತಿಳಿಸಿದ್ದಾರೆ.
ಭಧ್ರತೆಗಾಗಿ 10 ಡಿಆರ್, ಕೆಎಸ್ಆರ್ಪಿ ತುಕಡಿ ಸೇರಿದಂತೆ 750 ಸಿಬ್ಬಂದಿ ನಿಯೋಜಿಸಲಾಗಿದೆ. ಮುಂಜಾನೆ 5 ಗಂಟೆಯಿಂದಲೇ ಪೊಲೀಸರು ಗುಡ್ ಮಾರ್ನಿಂಗ್ ಬೀಟ್ ನಿಯೋಜನೆ ಮಾಡಲಾಗಿದ್ದು, ಸೂಕ್ಷ್ಮ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ತಿಳಿಸಿದ್ರು.
ಸಾರ್ವಜನಿಕ ಸ್ಥಳಗಳಲ್ಲಿ ಪೂಜೆ, ಸಂಭ್ರಮಾಚರಣೆ ಮಾಡುವಂತಿಲ್ಲ. ಈಗಾಗಲೇ ರೌಡಿ ಶೀಟರ್ಗಳಿಗೆ ಈ ನಿಟ್ಟಿನಲ್ಲಿ ಎಚ್ಚರಿಕೆ ನೀಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸ್ಪಷ್ಟಪಡಿಸಿದ್ದಾರೆ.