ETV Bharat / state

ಶಾರ್ಟ್ ಸರ್ಕ್ಯೂಟ್​​ನಿಂದ ಹೊತ್ತಿ ಉರಿದ ವಿದ್ಯುತ್ ಕಂಬ... ತಪ್ಪಿದ ಭಾರೀ ಅನಾಹುತ - Electricity circuit in Chikkaballapur

ಚಿಕ್ಕಬಳ್ಳಾಪುರ ನಗರದ ಹೃದಯ ಭಾಗದಲ್ಲಿರುವ ಹಳೇ ತಾಲೂಕು ಕಚೇರಿ ಮುಂಭಾಗದಲ್ಲಿ ವಿದ್ಯುತ್ ಕಂಬದಲ್ಲಿ ಕಾಣಿಸಿಕೊಂಡ ಬೆಂಕಿಯನ್ನು ಕಂಡ ನಗರ ಠಾಣೆಯ ಪೊಲೀಸರು ಕೂಡಲೇ ಅಗ್ನಿಶಾಮಕ ದಳದವರನ್ನು ಕರೆಸಿ ವಿದ್ಯುತ್​ ಕಡಿತಗೊಳಿಸಿ ನಂತರ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

power-pole-burned-at-chikkaballapura
ವಿದ್ಯುತ್ ಶಾರ್ಟ್ ಸರ್ಕ್ಯೂಟ್
author img

By

Published : Dec 28, 2020, 10:28 PM IST

ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರು ನಗರದಲ್ಲಿ ಇದ್ದಕ್ಕಿದ್ದಂತೆ ಶಾರ್ಟ್ ಸರ್ಕ್ಯೂಟ್‌ನಿಂದ ವಿದ್ಯುತ್​ ಕಂಬದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಭಾರೀ ಅನಾಹುತ ತಪ್ಪಿದೆ.

ನಗರದ ಹೃದಯ ಭಾಗದಲ್ಲಿರುವ ಹಳೇ ತಾಲೂಕು ಕಚೇರಿ ಮುಂಭಾಗದಲ್ಲಿ ವಿದ್ಯುತ್ ಕಂಬದಲ್ಲಿ ಕಾಣಿಸಿಕೊಂಡ ಬೆಂಕಿಯನ್ನು ಕಂಡ ನಗರ ಠಾಣೆಯ ಪೊಲೀಸರು, ಕೂಡಲೇ ಅಗ್ನಿಶಾಮಕ ದಳದವರನ್ನು ಕರೆಸಿ ವಿದ್ಯುತ್​ ಕಡಿತಗೊಳಿಸಿ ನಂತರ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಎಂದಿನಂತೆ ಪ್ರತಿನಿತ್ಯ ನಗರ ನಿವಾಸಿಗಳು,‌ ಗ್ರಾಹಕರು ಓಡಾಟ ನಡೆಸುತ್ತಿದ್ದು, ಭಯಭೀತರಾಗಿ ನಡು ರಸ್ತೆಗೆ ಇಳಿದು ದಿಕ್ಕು ತೋಚದಂತಾಗಿದ್ದಾರೆ. ಹೊತ್ತಿ ಉರಿದ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ.

ಶಾರ್ಟ್ ಸರ್ಕ್ಯೂಟ್​​ನಿಂದ ಹೊತ್ತಿ ಉರಿದ ವಿದ್ಯುತ್ ಕಂಬ

ಓದಿ: ಈ ಬಾರಿ ಅದ್ಧೂರಿ ಹೊಸ ವರ್ಷಾಚರಣೆ ಇಲ್ಲ : ಬೆಂಗಳೂರಿನಲ್ಲಿ ಡಿ.31ರ ಸಂಜೆ 6ರಿಂದ ನಿಷೇಧಾಜ್ಞೆ

ವಿದ್ಯುತ್​ ಕಂಬದ ಕೆಳಗೆ ಬೀದಿಬದಿ ವ್ಯಾಪರಸ್ಥರು ಹಾಗೂ ಗಾಂಧಿ ವೃತ್ತದ ಬಳಿಯ ವ್ಯಾಪಾರಸ್ಥರು ತಮ್ಮ ಅಂಗಡಿಗಳನ್ನು ಬಂದ್ ಮಾಡಿ ರಸ್ತೆಗೆ ಓಡಿ ಬಂದಿದ್ದಾರೆ. ಶಾರ್ಟ್ ಸರ್ಕ್ಯೂಟ್ ಆದ ವಿದ್ಯುತ್​​ ಕಂಬದ ಕೆಳಗೆ ದ್ವಿಚಕ್ರ ವಾಹನಗಳನ್ನು ನಿಲ್ಲಿಸಿದ್ದು, ಕೆಲಕಾಲ ಭಯದಿಂದ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

ಸುಮಾರು 1 ಗಂಟೆಯಿಂದ ನಗರದ ಹಲವು ಕಡೆ ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸಿದ್ದು, ನಗರ ನಿವಾಸಿಗಳಿಗೆ ದಿಕ್ಕು ತೋಚದಂತಾಗಿ ಬೆಸ್ಕಾಂ ಅಧಿಕಾರಿಗಳಿಗೆ ಹಿಡಿಶಾಪ ಹಾಕಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.