ಚಿಕ್ಕಬಳ್ಳಾಪುರ: ಚಾಲಕನ ಅಜಾಗರೂಕತೆಯಿಂದ ಖಾಸಗಿ ಬಸ್ ಪಲ್ಟಿಯಾಗಿ 40 ಕ್ಕೂ ಹೆಚ್ಚು ಪ್ರಯಾಣಿಕರು ಆಸ್ಪತ್ರೆಗೆ ದಾಖಲಾದ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಅಮಿಟಗಾನಹಳ್ಳಿ ಗೇಟ್ ಬಳಿ ನಡೆದಿದೆ.
ಸುಮಾರು 40 ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಹಿಂದೂಪುರ-ತಿರುಪತಿ ಮಾರ್ಗವಾಗಿ ಪ್ರಯಾಣಿಸುತ್ತಿದ್ದ ಖಾಸಗಿ ಬಸ್ವೊಂದು ಚಾಲಕನ ನಿಯಂತ್ರಣ ತಪ್ಪಿ ಅಮಿಟಗಾನ ಹಳ್ಳಿ ಗೇಟ್ ಬಳಿಯ ಕಾಲುವೆಗೆ ಉರುಳಿ ಬಿದ್ದಿದೆ. ಆರು ಮಂದಿ ಪ್ರಯಾಣಿಕರ ಸ್ಥಿತಿ ಗಂಭೀರವಾಗಿದ್ದು, ಉಳಿದವರನ್ನು 10 ಕ್ಕೂ ಅಧಿಕ ಆಂಬ್ಯುಲೆನ್ಸ್ಗಳ ಮೂಲಕ ಸ್ಥಳೀಯ ಆಸ್ಪತ್ರೆಗೆ ರವಾನಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ: ಚಾಲಕನ ಅಜಾಗರೂಕತೆಯಿಂದ ಕಾರು ಅಪಘಾತ: ಇಬ್ಬರು ಸಾವು, ನಾಲ್ವರಿಗೆ ಗಂಭೀರ ಗಾಯ
ಆಸ್ಪತ್ರೆಗೆ ಸ್ಥಳೀಯ ಶಾಸಕ ಎಂ ಕೃಷ್ಣಾರೆಡ್ಡಿ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಚಾಲಕ ಮೊಬೈಲ್‌ನಲ್ಲಿ ಮಾತನಾಡುತ್ತಾ ಬಸ್ ಚಲಾಯಿಸಿದ ಪರಿಣಾಮ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಸ್ಥಳಕ್ಕೆ ಚಿಂತಾಮಣಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.