ಬಾಗೇಪಲ್ಲಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ನೇತೃತ್ವದಲ್ಲಿ ಅಕ್ಷರ ದಾಸೋಹ ನೌಕರರ ಸಂಘದ ತಾಲೂಕು ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿದರು.
ಸಿಐಟಿಯು ತಾಲೂಕು ಘಟಕದ ಅಧ್ಯಕ್ಷ ಬಿ.ಆಂಜನೇಯರೆಡ್ಡಿ ಮಾತನಾಡಿ, ಬಡ ಮಹಿಳೆಯರು ಬಿಸಿಯೂಟದ ಉದ್ಯೋಗವನ್ನೇ ನಂಬಿಕೊಂಡಿದ್ದು, ಕಳೆದ 4 ತಿಂಗಳಿಂದ ಆದಾಯವಿಲ್ಲದೆ ಸಂಕಷ್ಟದಲ್ಲಿದ್ದಾರೆ. ಇವರಿಗೆ ಆರ್ಥಿಕ ಪ್ಯಾಕೇಜ್ ಸಹ ಸರ್ಕಾರ ಘೊಷಣೆ ಮಾಡಿಲ್ಲ. ನಮ್ಮ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕು ಎಂದು ಮನವಿ ಮಾಡಿದರು.
ಪ್ರತಿಭಟನಾ ಸ್ಥಳಕ್ಕೆ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಹೆಚ್.ಎನ್.ಮಂಜುನಾಥಸ್ವಾಮಿ ಭೇಟಿ ನೀಡಿ ಮನವಿ ಪತ್ರ ಸ್ವೀಕರಿಸಿದರು.