ಚುನಾವಣೆ ಮುಂದೂಡಬೇಕೆಂದು ಒತ್ತಾಯಿಸಿ ಜಿಲ್ಲೆಯ ಚಿಂತಾಮಣಿ ತಾಲೂಕಿನ ಊಲವಾಡಿ ಗ್ರಾಮದಲ್ಲಿ ಹಾಲು ಉತ್ಪಾದಕ ಸಹಕಾರ ಸಂಘದ ಷೇರುದಾರರು ಪ್ರತಿಭಟನೆ ನಡೆಸಿದ್ರು.
ಚಿಕ್ಕಬಳ್ಳಾಪುರ: ಹಾಲು ಉತ್ಪಾದಕ ಸಹಕಾರ ಸಂಘದ ಚುನಾವಣೆ ಮುಂದೂಡಬೇಕೆಂದು ಒತ್ತಾಯಿಸಿ ಜಿಲ್ಲೆಯ ಚಿಂತಾಮಣಿ ತಾಲೂಕಿನ ಊಲವಾಡಿ ಗ್ರಾಮದಲ್ಲಿ ಸಂಘದ ಷೇರುದಾರರು ಪ್ರತಿಭಟನೆ ನಡೆಸಿದ್ದಾರೆ.
ಸಹಕಾರ ಸಂಘದ ಷೇರುದಾರರು ಪ್ರತಿಭಟನೆ ನಡೆಸಿದ್ದು, ರಾಜಕೀಯ ಒತ್ತಡಕ್ಕೆ ಮಣಿದು ಅಧಿಕಾರಿಗಳು ಚುನಾವಣೆ ನಡೆಸುತ್ತಿದ್ದಾರೆಂದು ಆರೋಪ ಮಾಡಿದ್ದಾರೆ. 353 ಮತದಾರರಿದ್ರು 73 ಸದಸ್ಯ ಮತದಾರರಿಗೆ ಮಾತ್ರ ಮತದಾನದ ಹಕ್ಕು ನೀಡಿದ್ದಾರೆಂದು ಆರೋಪ ಮಾಡಿದ್ದಾರೆ.
![undefined](https://s3.amazonaws.com/saranyu-test/etv-bharath-assests/images/ad.png)
ಇದರ ಪರವಾಗಿಯೇ ಮತದಾನ ವಂಚಿತರಿಂದ ಮತಗಟ್ಟೆ ಎದುರು ಅಂಬೇಡ್ಕರ್ ಭಾವಚಿತ್ರವಿಟ್ಟು ಪ್ರತಿಭಟನೆ ನಡೆಸಲಾಗಿದ್ದು, 100 ಕ್ಕೂ ಹೆಚ್ಚು ಮಂದಿಯನ್ನು ಚಿಂತಾಮಣಿ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದ್ದು, ಪೊಲೀಸರು ಹರಸಾಹಸಪಟ್ಟು ನಿಯಂತ್ರಣಗೊಳಿಸಿದ್ದಾರೆ.