ಚಿಂತಾಮಣಿ (ಚಿಕ್ಕಬಳ್ಳಾಪುರ): ಚಿಂತಾಮಣಿ ತಾಲೂಕಿನ ಎಲ್ಲಾ ಕೆರೆಗಳಿಗೆ ಕೆ.ಸಿ. ವ್ಯಾಲಿ, ಹೆಚ್.ಎನ್. ವ್ಯಾಲಿ ಹಾಗೂ ಎತ್ತಿನಹೊಳೆ ಯೋಜನೆ ಮೂಲಕ ಶೀಘ್ರವೇ ನೀರು ಹರಿಸಬೇಕು, ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಕರ್ನಾಟಕ ರೈತ ಸಂಘದ ಪದಾಧಿಕಾರಿಗಳು ಎಚ್ಚರಿಕೆ ರವಾನಿಸಿದ್ದಾರೆ.
ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ರೈತ ಸಂಘದ ಪದಾಧಿಕಾರಿಗಳು, ತಹಶಿಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ಬಳಿಕ ಮಾತನಾಡಿದ ಕರ್ನಾಟಕ ರೈತ ಸಂಘ ಉಪಾಧ್ಯಕ್ಷ ರಘುನಾಥರೆಡ್ಡಿ ಜೆ.ವಿ, ಕೇಂದ್ರ ಸರ್ಕಾರ ಜಾರಿ ಮಾಡಿರುವ ಕೃಷಿ ಕಾಯ್ದೆಗಳಿಂದ ರೈತರಿಗೆ ಬಹಳ ತೊಂದರೆಯಾಗುತ್ತಿದೆ. ಹೀಗಾಗಿ ಸರ್ಕಾರ ರೈತ ವಿರೋಧಿ ನೀತಿಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
ಇದನ್ನೂ ಓದಿ: ಸರ್ಕಾರದ ದ್ವಂದ್ವ ನೀತಿಗೆ ಆಕ್ರೋಶ: ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಪ್ರತಿಭಟನೆ
ಅದೇ ರೀತಿ ಸತತ ಬರಗಾಲ ಆವರಿಸಿರುವ ಚಿಂತಾಮಣಿ ತಾಲೂಕಿಗೆ ಯಾವುದೇ ಶಾಶ್ವತ ನೀರಾವರಿ ಮೂಲಗಳಿಲ್ಲ. ಹೀಗಾಗಿ ಕೆ.ಸಿ.ವ್ಯಾಲಿ, ಹೆಚ್.ಎನ್. ವ್ಯಾಲಿ ಹಾಗೂ ಎತ್ತಿನಹೊಳೆ ಯೋಜನೆ ಮೂಲಕ ಶೀಘ್ರವೇ ನೀರು ಹರಿಸಬೇಕು ಎಂದರು.