ಬಾಗೇಪಲ್ಲಿ/ ಬಾಗೇಪಲ್ಲಿ : ಕಸಬಾ ತಾಲೂಕಿನ ಘಂಟಂವಾರಿಪಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ 37 ಕುಟುಂಬಗಳು ವಾಸವಾಗಿರುವ ಬಂಗ್ಲಾಕುಂಟೆ ಬಡಾವಣೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಗ್ರಾಪಂ ಮುಂಭಾಗ ಮಹಿಳೆಯರು ಖಾಲಿ ಬಿಂದಿಗೆಗಳನ್ನು ಪ್ರದರ್ಶಿಸಿ ಪ್ರತಿಭಟಿಸಿದರು.
ಗುರುವಾರ ಬೆಳಗ್ಗೆ ಗ್ರಾಮ ಪಂಚಾಯತ್ ಮುಂಭಾಗ ಜಮಾಯಿಸಿದ ಮಹಿಳೆಯರು ಗ್ರಾಮ ಪಂಚಾಯತ್ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕಳೆದ ಮೂರು ತಿಂಗಳಿಂದ ಗ್ರಾಮದಲ್ಲಿ ನೀರಿನ ಸಮಸ್ಯೆ ಉದ್ಭವವಾಗಿದೆ. ಇಷ್ಟಾದರೂ ಗ್ರಾಮ ಪಂಚಾಯ್‌ನ ಅಧಿಕಾರಿಗಳು, ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪಂಚಾಯತ್ ಪಿಡಿಒ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದ್ದಾರೆ ಎಂದು ಮಹಿಳೆಯರು ದೂರಿದ್ದಾರೆ.
ಗುರುವಾರ ಆರಂಭವಾದ ಪ್ರತಿಭಟನೆ ಇಂದು ಕೂಡ ಮುಂದುವರೆದಿದೆ. ಗ್ರಾಮ ಪಂಚಾಯತ್ ಕಾರ್ಯಾಲಯದ ಮುಂದೆ ಅಮೃತ ಮಹೋತ್ಸವ ಕಾರ್ಯಕ್ರಮ ಪಾಲ್ಗೊಳ್ಳಲು ಬಂದಿದ್ದ ಬಾಗೇಪಲ್ಲಿ ತಾಲೂಕು ತಹಶೀಲ್ದಾರ್ ಡಿ ಎ ದಿವಾಕರ್ ಮಧ್ಯಪ್ರವೇಶಿಸಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುತ್ತೇವೆ ಎಂಬ ಆಶ್ವಾಸನೆ ನೀಡಿದ ಬಳಿಕ ಮಹಿಳೆಯರು ಇಂದು ಪ್ರತಿಭಟಿಸಿದರು.