ಚಿಕ್ಕಬಳ್ಳಾಪುರ: ಸ್ಮಶಾನದಲ್ಲಿ ಶವ ಸಂಸ್ಕಾರಕ್ಕೆ ಜಾಗ ಸಿಗದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಶವವಿಟ್ಟು ಸಂಬಂಧಿಗಳು ಪ್ರತಿಭಟನೆ ನಡೆಸಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಜಿಲ್ಲೆಯ ಚಿಂತಾಮಣಿ ತಾಲೂಕಿನ ರಂಗೇನಹಳ್ಳಿ ಗ್ರಾಮದ ವೃದ್ಧೆ ವೆಂಕಟಮ್ಮ (80) ಶನಿವಾರ ಮೃತಪಟ್ಟಿದ್ದು, ಅವರ ಹೊಲದಲ್ಲಿಯೇ ಶವ ಸಂಸ್ಕಾರಕ್ಕೆ ಕಟುಂಬಸ್ಥರು ಮುಂದಾಗಿದ್ದರು. ಆದರೆ ಅದೇ ಗ್ರಾಮದ ನಾರಾಯಣಸ್ವಾಮಿ ಎಂಬುವವರು ಶವ ಸಂಸ್ಕಾರ ಮಾಡದಂತೆ ಅಡ್ಡಿಪಡಿಸಿ, ಬೇರೆಡೆ ಶವಸಂಸ್ಕಾರ ಮಾಡುವಂತೆ ಸೂಚಿಸಿದ್ದಾರೆ. ಅಂತ್ಯಸಂಸ್ಕಾರಕ್ಕೆ ಬೇರೆಡೆ ಅವಕಾಶ ಸಿಗದ ಹಿನ್ನೆಲೆ ಕುಟುಂಬಸ್ಥರು ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನಕ್ಕೆ ಶವ ತಂದು ಪ್ರತಿಭಟನೆ ನಡೆಸಿದ್ದಾರೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ
ದಿಢೀರ್ ಪ್ರತಿಭಟನೆಗೆ ಇಳಿದ ಕುಟುಂಬಸ್ಥರ ಮನವೊಲಿಸಲು ಪೊಲೀಸರು ಹಾಗೂ ಅಧಿಕಾರಿಗಳ ಹರಸಾಹಸಪಟ್ಟಿದ್ದಾರೆ. ಅಪರ ಜಿಲ್ಲಾಧಿಕಾರಿ ಅಮರೇಶ್ ಸ್ಥಳಕ್ಕೆ ಭೇಟಿ ನೀಡಿ, ಶವಸಂಸ್ಕಾರಕ್ಕೆ ಅನುಕೂಲ ಮಾಡಿಕೊಡುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನೆ ವಾಪಸ್ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ಆಹಾರ ಹುಡುಕಿ ಬಂದ 7 ನವಿಲುಗಳಿಗೆ ಇಲಿ ಪಾಷಾಣ ಹಾಕಿ ಕೊಂದ ವ್ಯಕ್ತಿ ಬಂಧನ