ಚಿಕ್ಕಬಳ್ಳಾಪುರ: ರಾಜ್ಯ ಸರ್ಕಾರ ಕನಿಷ್ಠ ವೇತನ ನೀಡುವ ಜೊತೆಗೆ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ನೌಕರರ ಸಂಘದ ವತಿಯಿಂದ ಜಿಲ್ಲಾಡಳಿತ ಕಚೇರಿ ಎದುರು ಪ್ರತಿಭಟನೆ ನಡೆಸಿದ್ರು.
ರಾಜ್ಯ ಸರ್ಕಾರ ನಿಗದಿಪಡಿಸಿರುವ ಕನಿಷ್ಠ ಭತ್ಯೆ ಸೇರಿದಂತೆ ವೇತನವನ್ನು ತಿಂಗಳ 5ರ ಒಳಗೆ ನೀಡಬೇಕು. 60 ವರ್ಷ ಮೇಲ್ಪಟ್ಟ ನಿವೃತ್ತಿ ನೌಕಕರರಿಗೆ ಉಪಧನ ಹಾಗೂ ಮರಣ ಪರಿಹಾರ ಧನವನ್ನು ಕೊಡಿಸಬೇಕು.
ಡಾಟಾ ಎಂಟ್ರಿ ಆಪರೇಟರ್ಗಳನ್ನು ಪದೋನ್ನತಿಗೆ ಅವಕಾಶ ಕಲ್ಪಿಸಿ ಕೊಡಬೇಕು ಹಾಗೂ ಎಲ್ಲಾ ನೌಕರರಿಗೆ ಕನಿಷ್ಠ ವೇತನ ನೀಡಬೇಕು ಎಂದು ಒತ್ತಾಯಿಸಿ, ಜಿಲ್ಲಾಡಳಿತದ ಮುಂದೆ ಪ್ರತಿಭಟನೆ ನಡೆಸಿ, ಜಿಲ್ಲಾ ಸಿಇಓಗೆ ಮನವಿ ಪತ್ರವನ್ನು ಸಲ್ಲಿಸಿದರು.