ಚಿಕ್ಕಬಳ್ಳಾಪುರ: ಕೋವಿಡ್-19 ಸೋಂಕಿತರ ಪರೀಕ್ಷಾ ಸ್ಥಳವನ್ನು ತೆರವುಗೊಳಿಸುವಂತೆ ಆಗ್ರಹಿಸಿ ಚಿಂತಾಮಣಿ ನಗರದ 2ನೇ ವಾರ್ಡ್ನ ಆಶ್ರಯ ಬಡಾವಣೆ ನಿವಾಸಿಗಳು ಪ್ರತಿಭಟನೆ ನಡೆಸಿದರು.
ಇಲ್ಲಿನ ಸಮುದಾಯ ಭವನದಲ್ಲಿ ತಾಲೂಕು ಆರೋಗ್ಯಾಧಿಕಾರಿಗಳು ಹಾಗೂ ನಗರಸಭೆ ಅಧಿಕಾರಿಗಳು ಕೊರೊನಾ ಸೋಂಕಿತರ ಪರೀಕ್ಷೆಗೆ ಮುಂದಾಗಿದ್ದು, ಸ್ಥಳೀಯರಲ್ಲಿ ಭಯ ಹೆಚ್ಚಿಸಿದೆ. ಇಲ್ಲಿ ಬಡ ಜನರೇ ಹೆಚ್ಚಾಗಿ ವಾಸಿಸುತ್ತಿದ್ದಾರೆ. ಇಂತಹ ಸ್ಥಳದಲ್ಲಿ ಪರೀಕ್ಷಾ ಕೇಂದ್ರ ತೆರೆದು ಆತಂಕ ಹೆಚ್ಚಿಸಬಾರದು ಎಂದು ನಗರಸಭೆ ಸದಸ್ಯ ಜೈಭೀಮ್ ಮುರಳಿ ಒತ್ತಾಯಿಸಿದರು. ಕೂಡಲೇ ತಾಲೂಕು ಆರೋಗ್ಯಾಧಿಕಾರಿಗಳು ಬೇರೆಡೆ ಸ್ಥಳಾಂತರಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದರು.