ಚಿಕ್ಕಬಳ್ಳಾಪುರ: ಮೌಂಡಸ್ ಚಂಡಮಾರುತದ ಪರಿಣಾಮ ರಾಜ್ಯದಲ್ಲೂ ಬೀರಿದೆ. ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆ ಶಾಲಾ ಕಾಲೇಜುಗಳ ಮಕ್ಕಳ ಆರೋಗ್ಯದ ಹಿತ ದೃಷ್ಟಿಯಿಂದ ಇಂದು ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಎನ್ಎಂ ನಾಗರಾಜು ರಜೆ ಘೋಷಿಸಿದ್ದಾರೆ. ಸೋಮವಾರ ದಿನಾಂಕ 12/12/2022 ಒಂದು ದಿನ ಮಾತ್ರ ಶಾಲಾ ಕಾಲೇಜುಗಳ ತರಗತಿಗಳಿಗೆ ರಜೆಯನ್ನು ಘೋಷಿಸಲಾಗಿದೆ.
ಜಿಲ್ಲೆಯಾದ್ಯಂತ ಕಳೆದ ಎರೆಡು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಚಿಕ್ಕಬಳ್ಳಾಪುರ ಕೂಲ್ ಆಗಿದೆ. ಸದ್ಯ ಅಧಿಕ ಮಳೆಯಿಂದ ವಿದ್ಯಾರ್ಥಿಗಳಿಗೆ ಶಾಲಾ ಕಾಲೇಜುಗಳಿಗೆ ಹೋಗಲು ಬರಲು ಪರದಾಟ ನಡೆಸುವಂತಾಗಿದೆ. ಮತ್ತೊಂದು ಕಡೆ ವ್ಯಾಪಾರವಿಲ್ಲದೆ ವ್ಯಾಪಾರಸ್ಥರು ಪರದಾಡುತ್ತಿದ್ದಾರೆ. .
ಈಗಾಗಲೇ ಹಲವು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಬೆನ್ನಲ್ಲೇ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ. ಸದರಿ ರಜೆಯನ್ನು ಸರಿದೂಗಿಸಲು ಮುಂದಿನ ದಿನಗಳಲ್ಲಿ ತರಗತಿಗಳನ್ನು ತೆಗೆದುಕೊಳ್ಳಲು ತಿಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎನ್. ಎಂ ನಾಗರಾಜ್ ಅವರು ಪ್ರಕಟಣೆಯಲ್ಲಿ ವಿವರಿಸಿದ್ದಾರೆ.
ಇದನ್ನೂ ಓದಿ: ಮಾಂಡೌಸ್ ಚಂಡಮಾರುತದ ಎಫೆಕ್ಟ್: ರಾಜ್ಯದಲ್ಲಿ ಉಷ್ಣಾಂಶ ತೀವ್ರ ಕುಸಿತ, ಮಳೆ ಮುಂದುವರಿಕೆ