ಚಿಕ್ಕಬಳ್ಳಾಪುರ: ಅಪ್ರಾಪ್ತ ಬಾಲಕಿ ಮೇಲೆ ಪಕ್ಕದ ಮನೆಯ ಯುವಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿರುವ ಹೇಯ ಕೃತ್ಯ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದಲ್ಲಿ ನಡೆದಿದೆ.
ಸಂತ್ರಸ್ತೆಯು 6ನೇ ತರಗತಿ ಓದುತ್ತಿದ್ದು, ಆರೋಪಿ ಯುವಕ ನಂದೀಶ್(25) ಆಕೆಯ ಮನೆಯ ಎದುರೇ ತಂಪು ಪಾನೀಯಗಳನ್ನು ಮಾರುತ್ತಿದ್ದ. ಅಪ್ರಾಪ್ತೆಯನ್ನು ಪುಸಲಾಯಿಸಿ ತಂಪುಪಾನೀಯಗಳನ್ನು ಸಂಗ್ರಹಿಸುವ ಗೋದಾಮಿಗೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾನೆಂದು ಬಾಲಕಿಯ ಪೋಷಕರು ಆರೋಪಿಸಿ ಬಾಗೇಪಲ್ಲಿ ಠಾಣೆಗೆ ದೂರು ನೀಡಿದ್ದಾರೆ.
ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಆರೋಪಿ ನಂದೀಶ್ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಪ್ರಕರಣ ಕುರಿತು ಬಾಗೇಪಲ್ಲಿ ಪೋಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಾಗಿದೆ.