ಚಿಕ್ಕಬಳ್ಳಾಪುರ: ಊಟ ಕೊಡಿಸುವುದಾಗಿ ನಂಬಿಸಿ ಏಳು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಕಾಮುಕನಿಗೆ ಚಿಕ್ಕಬಳ್ಳಾಪುರ ಜಿಲ್ಲಾ ಸತ್ರ ನ್ಯಾಯಾಲಯ ಕಠಿಣ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.
ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲೂಕಿನ ಬಾಲೇನಹಳ್ಳಿಯ ಸತೀಶ್ ಜುಲೈ 31ರ 2019 ರಂದು 7 ವರ್ಷದ ಬಾಲಕಿಗೆ ಊಟ ಕೊಡಿಸುವುದಾಗಿ ನಂಬಿಸಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದ. ನ್ಯಾಯಾಲಯವು ಅಪರಾಧಿಗೆ 20 ವರ್ಷಗಳ ಕಠಿಣ ಶಿಕ್ಷೆ, ಮತ್ತು 10 ಸಾವಿರ ರೂಪಾಯಿ ದಂಡ ವಿಧಿಸಿದೆ.
ಚಿಕ್ಕಬಳ್ಳಾಪುರ ಒಂದನೇ ಹೆಚ್ಚುವರಿ ನ್ಯಾಯಾಧೀಶರಾದ ನಟರಾಜ್ ಅವರು ಈ ಆದೇಶ ಹೊರಡಿಸಿದ್ದಾರೆ.
ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.