ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದೆ. ಇಂದು 32 ಜನರಲ್ಲಿ ಸೋಂಕು ದೃಢಪಟ್ಟಿದ್ದು, 68 ಸೋಂಕಿತರು ಸಂಪೂರ್ಣ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
ಚಿಕ್ಕಬಳ್ಳಾಪುರ 11, ಬಾಗೇಪಲ್ಲಿ ಚಿಂತಾಮಣಿ ತಲಾ 1, ಗೌರಿಬಿದನೂರು 11, ಗುಡಿಬಂಡೆ 3, ಶಿಡ್ಲಘಟ್ಟ 5 ಜನರಲ್ಲಿ ಸೋಂಕು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 11,526ಕ್ಕೆ ಏರಿಕೆಯಾಗಿದೆ.