ಚಿಕ್ಕಬಳ್ಳಾಪುರ : ನೀವೇನಾದ್ರು ಹೊಸ ವರ್ಷಾಚರಣೆಗೆ ನಂದಿಬೆಟ್ಟಕ್ಕೆ ಪ್ಲಾನ್ ಮಾಡಿಕೊಂಡಿದ್ದರೆ ಜಿಲ್ಲಾಡಳಿತದ ನಿಯಮ ತಿಳಿದುಕೊಳ್ಳುವುದು ಒಳಿತು. ವಿಶ್ವವಿಖ್ಯಾತ ಗಿರಿಧಾಮಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ತಿಳಿಸಿದ್ದಾರೆ. ಡಿಸೆಂಬರ್ 31 ಸಂಜೆ 6 ಗಂಟೆಯಿಂದ ಜನವರಿ 1 ಬೆಳಗ್ಗೆ 6 ಗಂಟೆವರೆಗೂ ನಿರ್ಬಂಧ ಜಾರಿಯಲ್ಲಿರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಕೋವಿಡ್ ತಡೆಯುವ ಉದ್ದೇಶದಿಂದ ಈ ಕ್ರಮ ತೆಗೆದುಕೊಳ್ಳಲಾಗಿದ್ದು, ಈಗಾಗಲೇ ನಂದಿಬೆಟ್ಟದ ಬಳಿ ಡಿ. 31ರಂದು ರೂಮ್ ಬುಕಿಂಗ್ ರದ್ದುಪಡಿಸಲಾಗಿದೆ. ನಂದಿಗಿರಿಧಾಮದ ಸುತ್ತಮುತ್ತ ಪೊಲೀಸ್ ಇಲಾಖೆ ಬಂದೋಬಸ್ತ್ ಮಾಡಿದ್ದು ರಾತ್ರಿ 11.30ರವೆರೆಗೆ ಮಾತ್ರವೇ ಪಾರ್ಟಿ, ಸಂಭ್ರಮಾಚರಣೆಗೆ ಅವಕಾಶ ನೀಡಲಾಗಿದೆ ಎಂದು ಚಿಕ್ಕಬಳ್ಳಾಫುರ ಎಸ್ಪಿ ಡಿ.ಎಲ್.ನಾಗೇಶ್ ಹೇಳಿದ್ದಾರೆ.
ಇದನ್ನೂ ಓದಿ: ಡಿಸೆಂಬರ್ 31ರ ರಾತ್ರಿ 9 ಗಂಟೆಯ ನಂತರ ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ