ETV Bharat / state

ಸ್ಕೂಟಿಗೆ ಟಿಪ್ಪರ್ ಡಿಕ್ಕಿ: ನರ್ಸಿಂಗ್ ವಿದ್ಯಾರ್ಥಿನಿ ಸಾವು - nursing student death

ಸ್ಕೂಟಿಯಲ್ಲಿ ತೋಟಕ್ಕೆ ಹೋಗಿ ಬರುವ ವೇಳೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ನರ್ಸಿಂಗ್ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಬಂಡಹಳ್ಳಿ ಸಮೀಪ ನಡೆದಿದೆ.

nursing student death
ಸಾವನ್ನಪ್ಪಿದ ನರ್ಸಿಂಗ್ ವಿದ್ಯಾರ್ಥಿನಿ
author img

By

Published : Jul 28, 2020, 10:38 PM IST

ಚಿಕ್ಕಬಳ್ಳಾಪುರ: ಸ್ಕೂಟಿಯಲ್ಲಿ ತೋಟಕ್ಕೆ ಹೋಗಿ ಬರುವ ವೇಳೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ನರ್ಸಿಂಗ್ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಬಂಡಹಳ್ಳಿ ಸಮೀಪ ನಡೆದಿದೆ.

ಬಂಡಹಳ್ಳಿ ಶಿವರಾಜ್​ ಪುತ್ರಿ (19) ನರ್ಸಿಂಗ್ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ಯುವತಿ ತೋಟಕ್ಕೆ ಬರುವ ವೇಳೆ ಹಿಂದಿನಿಂದ ಬಂದ ಲಾರಿಯೊಂದು ಸ್ಕೂಟಿಗೆ ಡಿಕ್ಕಿ ಹೊಡೆದಿದೆ. ಅಪಘಾತವಾದ ನಂತರ ಲಾರಿ ಚಾಲಕ ಲಾರಿಯನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಯುವತಿ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.

ಪ್ರತಿನಿತ್ಯ ಈ ಮಾರ್ಗದಲ್ಲಿ ಟಿಪ್ಪರ್ ಲಾರಿಗಳ ಹಾವಳಿ ಹೆಚ್ಚಾಗಿದೆ. ಕಳೆದ 10 ದಿನಗಳ ಹಿಂದೆ ಟಿಪ್ಪರ್ ಲಾರಿಯಿಂದ ವ್ಯಕ್ತಿಯೋರ್ವರು ಮೃತಪಟ್ಟಿದ್ದು, ಇದರಿಂದ ಈ ಮಾರ್ಗದಲ್ಲಿ ಓಡಾಡಲು ಜನತೆ ಭಯಭೀತರಾಗಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.