ETV Bharat / state

ದುಬಾರಿ ಬೆಲೆಗೆ ತಂಬಾಕು ಉತ್ಪನ್ನ ಮತ್ತು ಆಹಾರ ಪದಾರ್ಥಗಳ ಮಾರಾಟ - Tobacco product sales expensive prices

ಅಂಗಡಿಯವರಿಂದ ಕಡಿಮೆ ಬೆಲೆಗೆ ಸಿಗುತ್ತಿದ್ದ ತಂಬಾಕು ಉತ್ಪನ್ನಗಳು ಮತ್ತು ಆಹಾರ ಪದಾರ್ಥಗಳಿಗೆ ಕೃತಕ ಅಭಾವ ಸೃಷ್ಟಿಸಿ ದುಬಾರಿ ಬೆಲೆಗೆ ಮಾರಾಟ ಮಾಡಲಾಗುತ್ತಿದೆ.

Chikkaballapur
ದುಬಾರಿ ಬೆಲೆಗೆ ತಂಬಾಕು ಉತ್ಪನ್ನ ಮಾರಾಟ
author img

By

Published : May 25, 2020, 10:26 AM IST

ಚಿಕ್ಕಬಳ್ಳಾಪುರ: ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಸರ್ಕಾರದ ಆದೇಶಕ್ಕೆ ಕವಡೆ ಕಾಸಿನ ಕಿಮ್ಮತ್ತು ನೀಡದ ಅಂಗಡಿ ಮಾಲೀಕರು ಮಾತ್ರ ಎಗ್ಗಿಲ್ಲದೆ ತಂಬಾಕು ಉತ್ಪನ್ನವನ್ನು ಮಾರಾಟ ಮಾಡುತ್ತಿದ್ದಾರೆ.

ಕಡಿಮೆ ಬೆಲೆಗೆ ಸಿಗುತ್ತಿದ್ದ ತಂಬಾಕು ಉತ್ಪನ್ನಗಳನ್ನು ಕೃತಕ ಅಭಾವ ಸೃಷ್ಟಿಸಿ ದುಬಾರಿ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಸಿಗರೇಟ್ ಬೆಲೆ ಮೂಲ ಬೆಲೆಗಿಂತ ಮೂರು ಪಟ್ಟು ಹೆಚ್ಚಿಸಿ ಮಾರಾಟ ಮಾಡಲಾಗುತ್ತಿದೆ. ಕಿಂಗ್ ಸಿಗರೇಟ್​​ನ ಮೂಲ ಬೆಲೆ 15 ರೂಪಾಯಿ ಇದ್ದು, ಇದನ್ನು ಅಂಗಡಿಯವರು 30 ರೂಪಾಯಿಗೆ ಮಾರಾಟ ಮಾಡುತ್ತಿದ್ದಾರೆ. ಇನ್ನು ಸ್ಮಾಲ್ ಸಿಗರೇಟ್​​ನ ಮೂಲ ಬೆಲೆ 10 ರೂಪಾಯಿ ಇದ್ದು, 20 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ.

ದಿನಸಿ ಪದಾರ್ಥಗಳ ಬೆಲೆಯೂ ಏರಿಕೆ:
ಅಡುಗೆಗೆ ಬಳಸುವ ಎಣ್ಣೆ, ಸಕ್ಕರೆ, ಬೇಳೆ ಸೇರಿದಂತೆ ಮತ್ತಿತರ ಅಗತ್ಯ ಆಹಾರ ಪದಾರ್ಥಗಳ ಬೆಲೆಯಲ್ಲೂ ಏರಿಕೆ ಆಗಿದೆ. ಈ ಬಗ್ಗೆ ವಿಚಾರಿಸಿದರೆ ಅಂಗಡಿವರು ದಾಸ್ತಾನು ಇಲ್ಲ. ಜೊತೆಗೆ ಸರಿಯಾದ ಸಪ್ಲೆ ಆಗುತ್ತಿಲ್ಲ. ಆ ಕಾರಣಕ್ಕೆ ಸಾಮಾನ್ಯ ದಿನಗಳಲ್ಲಿ ಇರುವ ಬೆಲೆಗಿಂತ ಸ್ವಲ್ಪ ಹೆಚ್ಚು ಮಾಡಲಾಗಿದೆ ಎಂದು ಹೇಳುತ್ತಾರೆ.

ಒಟ್ಟಾರೆಯಾಗಿ ಡೀಲರ್​​ಗಳು ಕೃತಕ ಅಭಾವ ಸೃಷ್ಟಿಸಿ ತಂಬಾಕು ಉತ್ಪನ್ನಗಳು ಮತ್ತು ಆಹಾರ ಪದಾರ್ಥಗಳ ಬೆಲೆಗಳನ್ನು ಏರಿಕೆ ಮಾಡುವುದರ ಮೂಲಕ ಗ್ರಾಹಕರ ಜೇಬಿಗೆ ಕತ್ತರಿ ಹಾಕುತ್ತಿರುವುರುವುದು ಸಾಮಾನ್ಯವಾಗಿಬಿಟ್ಟಿದೆ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಿ ಡೀಲರ್ ಮತ್ತು ಅಂಗಡಿ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಬೇಕಾದ ಅನಿವಾರ್ಯತೆ ಇದೆ ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.