ಚಿಕ್ಕಬಳ್ಳಾಪುರ: ಏಕಕಾಲಕ್ಕೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಚಿಂತಾಮಣಿ ನಗರದಲ್ಲಿ ನಡೆದಿದೆ. ನಗರದ ಬಂಬೂ ಬಜಾರ್ ಸರ್ಕಲ್ ಬಳಿ ಚಿಂದಿ ಆಯುವ ವೇಳೆ ವ್ಯಕ್ತಿಯ ಮೇಲೆ ಶಾಲಾ ಬಸ್ ಹರಿದ ಪರಿಣಾಮ, ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೃತರನ್ನು ಚಿಂದಿ ಆಯುವ ವ್ಯಕ್ತಿಯೆಂದು ಗುರುತಿಸಲಾಗಿದೆ.
ನಗರದ ಲಕ್ಷ್ಮಿ ವಿದ್ಯಾಸಂಸ್ಥೆಗೆ ಸೇರಿದ ಶಾಲಾ ಬಸ್ ಆಗಿದ್ದು, ಶಾಲಾ ಮಕ್ಕಳನ್ನ ಕರೆದೊಯ್ಯುವ ವೇಳೆ ಈ ದುರ್ಘಟನೆ ನಡೆದಿದೆ. ಅತಿವೇಗದಿಂದ ಬಸ್ ಚಾಲನೆ ಮಾಡಿರುವುದೇ ಈ ಅಪಘಾತಕ್ಕೆ ಕಾರಣ ಎನ್ನಲಾಗ್ತಿದೆ. ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದಾನೆ. ಸ್ಥಳಕ್ಕೆ ಚಿಂತಾಮಣಿ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇನ್ನೂ ತಾಲೂಕಿನ ತಲಗವಾರ ಗೇಟ್ ಬಳಿ ಕೆಎಸ್ಆರ್ಟಿಸಿ ಬಸ್ ಮತ್ತು ಬೊಲೆರೋ ವಾಹನ ನಡುವೆ ಅಪಘಾತ ಸಂಭವಿಸಿದೆ, ಬೊಲೆರೋ ಚಾಲಕ ಮುನಿರೆಡ್ಡಿ 45 ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಶ್ರೀನಿವಾಸಪುರ ತಾಲೂಕಿನ ಗೌಡತಾತನಗಡ್ಡೆ ಗ್ರಾಮದ ನಿವಾಸಿ ಎಂದು ತಿಳಿದು ಬಂದಿದೆ.
ಬಸ್ನಲ್ಲಿದ್ದ 5 ಕ್ಕೂ ಅಧಿಕ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. ಸ್ಥಳಕ್ಕೆ ಚಿಂತಾಮಣಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ: ಚಂದ್ರಶೇಖರ್ ಗುರೂಜಿ ಅಂತ್ಯಸಂಸ್ಕಾರ ಮುಗಿಸಿ ವಾಪಸ್ ಆಗುವಾಗ ದುರಂತ: ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಕಾರು ಅಪಘಾತ