ಚಿಕ್ಕಬಳ್ಳಾಪುರ: ಜಿಲ್ಲೆಯ ಗುಡಿಬಂಡೆ ಪಟ್ಟಣದ ಕೆಲವು ವಾರ್ಡ್ಗಳಿಗೆ ಚರಂಡಿಯ ಕೊಳಚೆ ಮಿಶ್ರಿತ ಕುಡಿಯುವ ನೀರು ಸರಬರಾಜಾಗುತ್ತಿದ್ದರೂ, ಸಮಸ್ಯೆಗೆ ಯಾರೂ ಸ್ಪಂದಿಸುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುಮಾರು ನಾಲ್ಕು ವಾರ್ಡ್ಗಳ ಮನೆಗಳಿಗೆ ಸಮರ್ಪಕವಾದ ಚರಂಡಿ ವ್ಯವಸ್ಥೆಯೇ ಇಲ್ಲ. ಅಲ್ಲದೆ ಒಂದೆರಡು ವರ್ಷಗಳಿಂದ ಕುಡಿಯುವ ನೀರು ಸರಬರಾಜಿಗೆ ಪೈಪ್‌ಲೈನ್ ಅಳವಡಿಸಲಾಗಿದೆ. ಭೂಮಿಯ ಒಳಗೆ ಅಳವಡಿಸಬೇಕಾದ ಪೈಪ್ನ್ನು ರಸ್ತೆಯ ಮೇಲ್ಭಾಗ ಮತ್ತು ಮೋರಿಯಲ್ಲಿ ಅಳವಡಿಸಲಾಗಿದೆ. ಬಿಸಿಲು ಮಳೆಯಿಂದ ಹಾನಿಯಾಗಿ ಪೈಪ್‌ಲೈನ್ ಪೂರ್ಣ ಶಿಥಿಲಗೊಂಡಿದೆ. ಈ ನೀರನ್ನು ಬಳಸುತ್ತಿರುವ ವಾರ್ಡಗಳ ಸಾಕಷ್ಟು ಮಂದಿ ಅನಾರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.
ಈ ಬಗ್ಗೆ ಪಟ್ಟಣ ಪಂಚಾಯತ್ ಅಧಿಕಾರಿಗಳಿಗೆ ದೂರು ನೀಡಿದರೆ, ದೂರು ತೆಗೆದುಕೊಂಡು ಇಟ್ಟುಕೊಳ್ಳುತ್ತಾರೆಯೇ ಹೊರತು ಸಮಪರ್ಕವಾಗಿ ಸ್ಪಂದಿಸುತ್ತಿಲ್ಲ ಎಂದು ಸಾರ್ವಜನಿಕರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.