ಚಿಕ್ಕಬಳ್ಳಾಪುರ: ಅಪ್ರಾಪ್ತ ವಿದ್ಯಾರ್ಥಿನಿಯನ್ನು ಅಪಹರಣ ಮಾಡಿ ಅತ್ಯಾಚಾರಕ್ಕೆ ಯತ್ನ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಜಿಲ್ಲಾ ಹೆಚ್ಚುವರಿ ಸತ್ರ ತ್ವರಿತ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗೆ 12 ವರ್ಷದ ಜೈಲು ಶಿಕ್ಷೆ ವಿಧಿಸಿದ್ದು, 30 ಸಾವಿರ ರೂಪಾಯಿ ದಂಡ ವಿಧಿಸಿದೆ.
ಏನಿದು ಪ್ರಕರಣ?
2018ರಲ್ಲಿ ನಡೆದ ಪ್ರಕರಣ ಇದಾಗಿದ್ದು, 16 ವರ್ಷದ ಬಾಲಕಿಯೋರ್ವಳನ್ನ 26 ವರ್ಷದ ನರಸಿಂಹ ಮೂರ್ತಿ ಅಪಹರಣ ಮಾಡಿ, ಅತ್ಯಾಚಾರಕ್ಕೆ ಯತ್ನಿಸಿದ್ದನು. ಇದಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರದ ನಂದಿಗಿರಿಧಾಮ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯ ಬಂಧನ ಮಾಡಿದ್ದ ಪೊಲೀಸರು, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು.
ವಾದ-ವಿವಾದ ಆಲಿಸಿದ ಚಿಕ್ಕಬಳ್ಳಾಪುರ ಹೆಚ್ಚುವರಿ ಸತ್ರ ತ್ವರಿತ ನ್ಯಾಯಾಲಯ ಮಹತ್ವದ ತೀರ್ಪು ನೀಡಿದ್ದು, ಆರೋಪಿ ನರಸಿಂಹಮೂರ್ತಿಗೆ 12 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಅಪ್ರಾಪ್ತೆ ಅಪಹರಣ ಮಾಡಿದ್ದಕ್ಕಾಗಿ 5 ವರ್ಷ ಜೈಲು ಶಿಕ್ಷೆ,ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ 7 ವರ್ಷ ಜೈಲು ಶಿಕ್ಷೆ ಹಾಗೂ 30 ಸಾವಿರ ರೂಪಾಯಿ ದಂಡ ವಿಧಿಸಿದೆ. ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಭಾನುಮತಿ ಈ ಮಹತ್ವದ ಆದೇಶ ಹೊರಡಿಸಿದರು.